ಅಸಾದುದ್ದೀನ್ ಓವೈಸಿ  
ದೇಶ

ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಜೈ ಭೀಮ್, 'ಜೈ ಪ್ಯಾಲೆಸ್ತೀನ್' ಎಂದ ಓವೈಸಿ

ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಐದನೇ ಅವಧಿಗೆ ಆಯ್ಕೆಯಾಗಿರುವ ಓವೈಸಿ ಅವರು ಇಂದು ನೂತನ ಸಂಸದರಾಗಿ ಉರ್ದು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ: ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂಘರ್ಷ ಪೀಡಿತ ಪಶ್ಚಿಮ ಏಷ್ಯಾ ಪ್ರದೇಶವನ್ನು ಶ್ಲಾಘಿಸಿದರು. ಇದು ಸದನದಲ್ಲಿ ಕೆಲಕಾಲ ತೀವ್ರ ಕೋಲಾಹಲಕ್ಕೆ ಕಾರಣವಾಯಿತು.

ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಐದನೇ ಅವಧಿಗೆ ಆಯ್ಕೆಯಾಗಿರುವ ಓವೈಸಿ ಅವರು ಇಂದು ನೂತನ ಸಂಸದರಾಗಿ ಉರ್ದು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನದ ನಂತರ, ಅವರು ಜೈ ಭೀಮ್, ಜೈ ತೆಲಂಗಾಣ, 'ಜೈ ಪ್ಯಾಲೆಸ್ತೀನ್' ಹಾಗೂ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದರು.

ಓವೈಸಿ ಅವರು ಪ್ರಸ್ತುತ ಸಂಘರ್ಷ ಎದುರಿಸುತ್ತಿರುವ ಪ್ಯಾಲೆಸ್ತೀನ್ ಅನ್ನು ಶ್ಲಾಘಿಸಿದ್ದಕ್ಕೆ ಕೆಲ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಮಾಣ ವಚನ ಮುಗಿದ ಬಳಿಕ ಕೋಲಾಹಲಕ್ಕೆ ಕಾರಣವಾಯಿತು.

ಈ ವೇಳೆ ಸ್ಪೀಕರ್ ಕುರ್ಚಿಯಲ್ಲಿದ್ದ ರಾಧಾ ಮೋಹನ್ ಸಿಂಗ್ ಅವರು, ಪ್ರಮಾಣ ವಚನದ ಹೊರತಾಗಿ ಇತರೆ ಯಾವುದೇ ವಿಷಯ ಖಡತದಲ್ಲಿ ದಾಖಲೆಯಾಗುವುದಿಲ್ಲ ಎಂದು ಸದಸ್ಯರಿಗೆ ಭರವಸೆ ನೀಡಿದರು.

ಆದರೂ ಕೆಲ ನಿಮಿಷಗಳ ಕಾಲ ಗೊಂದಲ ಮುಂದುವರಿದಿತ್ತು. ನಂತರ ಪ್ರಮಾಣ ವಚನ ಸ್ವೀಕಾರ ಆರಂಭವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!