ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ 
ದೇಶ

ರಾಷ್ಟ್ರವ್ಯಾಪಿ ಜಾತಿ ಗಣತಿಗೆ ಒತ್ತಾಯಿಸಿ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಈ ಸಂಬಂಧ ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಡಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.

ಚೆನ್ನೈ: 2021 ರಿಂದ ಬಾಕಿ ಉಳಿದಿರುವ ದಶವಾರ್ಷಿಕ ಜನಗಣತಿಯೊಂದಿಗೆ ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ತಮಿಳುನಾಡು ವಿಧಾನಸಭೆಯಲ್ಲಿ ಬುಧವಾರ ನಿರ್ಣಯ ಅಂಗೀಕರಿಸಲಾಯಿತು.

ಈ ಸಂಬಂಧ ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಂಡಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.

ಜಾತಿ ಗಣತಿ ನಡೆಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವುದರಿಂದ ಈ ನಿರ್ಣಯ ಅನಗತ್ಯ ಎಂದು ಆರ್ ಅರುಲ್(ಪಿಎಂಕೆ) ಹೇಳಿದರೂ ಸದನದಲ್ಲಿ ನಿರ್ಣಯವನ್ನು ಅಂಗೀಕರಿಸಿದಾಗ ಅವರು ವಿರೋಧಿಸಲಿಲ್ಲ.

ಸಿಎಂ ಸ್ಟಾಲಿನ್ ಮಂಡಿಸಿದ ನಿರ್ಣಯವು, "ಭಾರತದ ಪ್ರತಿಯೊಬ್ಬ ನಾಗರಿಕರಿಗೂ ಶಿಕ್ಷಣ, ಆರ್ಥಿಕತೆ ಮತ್ತು ಉದ್ಯೋಗದಲ್ಲಿ ಸಮಾನ ಹಕ್ಕುಗಳು ಮತ್ತು ಸಮಾನ ಅವಕಾಶಗಳನ್ನು ಖಚಿತಪಡಿಸಿಕೊಳ್ಳಲು ನೀತಿಗಳನ್ನು ರೂಪಿಸಲು ಜಾತಿ ಆಧಾರಿತ ಜನಗಣತಿ ಅತ್ಯಗತ್ಯ ಎಂದು ಸದನ ಪರಿಗಣಿಸುತ್ತದೆ. ಆದ್ದರಿಂದ ಈ ಸದನವು ಸರ್ವಾನುಮತದಿಂದ 2021 ರಿಂದ ಬಾಕಿ ಉಳಿದಿರುವ ಜನಗಣತಿಯೊಂದಿಗೆ ಜಾತಿ ಗಣತಿ ಕಾರ್ಯವನ್ನು ತಕ್ಷಣವೇ ಪ್ರಾರಂಭಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ.

ಟಿ ವೇಲ್ಮುರುಗನ್(ಟಿವಿಕೆ) ಮಾತನಾಡಿ, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ನಡೆಸಲು ಸಾಧ್ಯವಾಗದಿದ್ದರೆ, ವನ್ನಿಯಾರ್ ಸಮುದಾಯಕ್ಕೆ ಮೀಸಲಾತಿ ಒದಗಿಸಲು ಸುಪ್ರೀಂ ಕೋರ್ಟ್‌ಕೇಳಿದ ಅಗತ್ಯ ಮಾಹಿತಿಯನ್ನು ಸಂಗ್ರಹಿಸಬೇಕು ಎಂದರು.

ಆದಾಗ್ಯೂ, ವನ್ನಿಯಾರ್‌ಗಳಿಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರವು ಜಾತಿ ಗಣತಿಯನ್ನು ನಡೆಸಬಹುದು ಎಂದು ಆರ್ ಅರುಲ್(ಪಿಎಂಕೆ) ಅವರು ಹೇಳಿದರು.

ರಾಜ್ಯ ಸರ್ಕಾರ ಜಾತಿ ಗಣತಿ ನಡೆಸಬಹುದು ಎಂದು ಬಿಜೆಪಿ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ಅವರು ಹೇಳಿದ್ದಾರೆ. ಡಿಎಂಕೆಯ ಮಿತ್ರಪಕ್ಷಗಳಾದ ಕಾಂಗ್ರೆಸ್, ಸಿಪಿಎಂ, ಸಿಪಿಐ, ಕೊಂಗು ನಾಡು ಮಕ್ಕಳ್ ದೇಶಿಯ ಕಚ್ಚಿ ಮತ್ತು ಎಂಎಂಕೆ ನಿರ್ಣಯವನ್ನು ಬೆಂಬಲಿಸಿದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT