ಅರವಿಂದ್ ಕೇಜ್ರಿವಾಲ್ 
ದೇಶ

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಗೆ ಜುಲೈ 12 ರವರೆಗೆ ನ್ಯಾಯಾಂಗ ಬಂಧನ

ಸಿಬಿಐ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ರೋಸ್‌ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು.

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕಸ್ಟಡಿಯಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಜುಲೈ 12ರವರೆಗೆ, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ರೋಸ್‌ ಅವೆನ್ಯೂ ಕೋರ್ಟ್ ಶನಿವಾರ ಆದೇಶಿಸಿದೆ.

ಸಿಬಿಐ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಅವರನ್ನು ರೋಸ್‌ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಮತ್ತು ‘ತನಿಖೆ ಮತ್ತು ನ್ಯಾಯದ ಹಿತಾಸಕ್ತಿ’ಗಾಗಿ ಕೇಜ್ರಿವಾಲ್ ಅವರ ಕಸ್ಟಡಿ ಅಗತ್ಯವಿದೆ ಎಂದು ಈ ವೇಳೆ ಸಿಬಿಐ ವಾದಿಸಿತು.

ಆರೋಪಿಯ ವಿಚಾರಣೆ ನಡೆಸಿದ ರಜಾಕಾಲದ ನ್ಯಾಯಾಧೀಶರಾದ ಸುನೇನಾ ಶರ್ಮಾ ಅವರು, ಸಿಬಿಐ ಮನವಿಯನ್ನು ತಿರಸ್ಕರಿಸಿದ್ದು, ಕೇಜ್ರಿವಾಲ್ ಅವರನ್ನು ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ನ್ಯಾಯಾಲಯದ ರಜಾಕಾಲದ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಈ ಹಿಂದೆ ಜೂನ್ 26 ರಂದು ಕೇಜ್ರಿವಾಲ್ ಅವರನ್ನು 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದ್ದರು.

ಕೇಜ್ರಿವಾಲ್ ಪರ ವಿಚಾರಣೆಗೆ ಹಾಜರಾದ ಹಿರಿಯ ವಕೀಲ ವಿಕ್ರಮ್ ಚೌಧರಿ ಅವರು, ಆಗಸ್ಟ್ 2022 ರಿಂದ ಈ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಹೇಳಿದರು. "ನನ್ನ ಕಕ್ಷಿದಾರರನ್ನು ಮಾರ್ಚ್ 21 ರಂದು ಇಡಿ ಬಂಧಿಸಿದೆ. ಮೇ 10 ರಂದು ಮೂರು ವಾರಗಳವರೆಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು" ಎಂದು ಚೌಧರಿ ನ್ಯಾಯಾಲಯಕ್ಕೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?