ಅಸಾದುದ್ದೀನ್ ಓವೈಸಿ 
ದೇಶ

ಓವೈಸಿ ಮನೆ ಧ್ವಂಸ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು

ಬಲಪಂಥೀಯ ಸಂಘಟನೆಗಳ ಸದಸ್ಯರು ಎನ್ನಲಾದ ಕೆಲವು ಅಪರಿಚಿತ ದುಷ್ಕರ್ಮಿಗಳು ಗುರುವಾರ ದೆಹಲಿಯ ಲುಟ್ಯೆನ್‌ನ ಅಶೋಕ ರಸ್ತೆಯಲ್ಲಿರುವ ಓವೈಸಿ ನಿವಾಸದ ಹೊರಗೆ ಇರುವ ಸಂಸದರ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದಿದ್ದಾರೆ.

ನವದೆಹಲಿ: ಎರಡು ದಿನಗಳ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿರುವ ತಮ್ಮ ಅಧಿಕೃತ ನಿವಾಸದ ಹೊರಗೆ ನಾಮಫಲಕ ಧ್ವಂಸ ಮಾಡಿದ ಬಗ್ಗೆ ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬಲಪಂಥೀಯ ಸಂಘಟನೆಗಳ ಸದಸ್ಯರು ಎನ್ನಲಾದ ಕೆಲವು ಅಪರಿಚಿತ ದುಷ್ಕರ್ಮಿಗಳು ಗುರುವಾರ ದೆಹಲಿಯ ಲುಟ್ಯೆನ್‌ನ ಅಶೋಕ ರಸ್ತೆಯಲ್ಲಿರುವ ಓವೈಸಿ ನಿವಾಸದ ಹೊರಗೆ ಇರುವ ಸಂಸದರ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದಿದ್ದಾರೆ.

ದೆಹಲಿ ಪೊಲೀಸ್ ಅಧಿಕಾರಿಯ ಪ್ರಕಾರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143(ಕಾನೂನುಬಾಹಿರ ಸಭೆ), 147 (ಗಲಭೆ), 506 (ಅಪರಾಧ ಬೆದರಿಕೆ), ಮತ್ತು 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಅಡಿಯಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಗಮನಾರ್ಹವೆಂದರೆ, ಓವೈಸಿ ಅವರ ಮನೆ ಮೇಲೆ ದಾಳಿ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ದಾಳಿ ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಎದುರು ಇರುವ ಹೈದರಾಬಾದ್ ಸಂಸದರ ನಿವಾಸವು ಬಲಪಂಥೀಯ ಸಂಘಟನೆಗಳ ಸದಸ್ಯರಿಂದ ವಿಧ್ವಂಸಕ ಕೃತ್ಯಗಳಿಗೆ ಒಳಗಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್