ಕಾಂಗ್ರೆಸ್ ನಾಯಕ ಶ್ರೀನಿವಾಸ್ 
ದೇಶ

ತೆಲಂಗಾಣ: ಹಿರಿಯ ಕಾಂಗ್ರೆಸ್ ನಾಯಕ ಡಿ ಶ್ರೀನಿವಾಸ್ ನಿಧನ

ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ಶನಿವಾರ ಹೈದರಾಬಾದ್‌ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ.

ಹೈದರಾಬಾದ್: ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ಶನಿವಾರ ಹೈದರಾಬಾದ್‌ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಶ್ರೀನಿವಾಸ್ ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶ್ರೀನಿವಾಸ್ 2004 ಮತ್ತು 2009 ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ್ ರೆಡ್ಡಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಅವರು ಕಾಂಗ್ರೆಸ್ ತೊರೆದು 2016 ರಿಂದ 2022 ರವರೆಗೆ ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸದಸ್ಯರಾಗಿದ್ದರು. ತದನಂತರ ನಂತರ ಮತ್ತೆ ಕಾಂಗ್ರೆಸ್ ಸೇರಿದ್ದರು.

ಶ್ರೀನಿವಾಸ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, ತೆಲಂಗಾಣ ಸಚಿವರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video