ಕೆ ಕವಿತಾ PTI
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಜುಲೈ 1 ರಂದು ಬಿಆರ್‌ಎಸ್ ನಾಯಕಿ ಕೆ ಕವಿತಾ ಜಾಮೀನು ಅರ್ಜಿ ತೀರ್ಪು

ಜಾಮೀನು ಕೋರಿ ಕವಿತಾ ಅವರು ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಮೇ 28 ರಂದು ಆದೇಶ ಕಾಯ್ದಿರಿಸಿದ್ದು, ಜುಲೈ 1 ರಂದು ಮಧ್ಯಾಹ್ನ 2:30 ಕ್ಕೆ ತೀರ್ಪು ನೀಡಲಿದ್ದಾರೆ.

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ ಕವಿತಾ ಅವರ ಜಾಮೀನು ಅರ್ಜಿಗಳ ಕುರಿತು ದೆಹಲಿ ಹೈಕೋರ್ಟ್ ಸೋಮವಾರ ತನ್ನ ಆದೇಶ ಪ್ರಕಟಿಸುವ ಸಾಧ್ಯತೆಯಿದೆ.

ಜಾಮೀನು ಕೋರಿ ಕವಿತಾ ಅವರು ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಮೇ 28 ರಂದು ಆದೇಶ ಕಾಯ್ದಿರಿಸಿದ್ದು, ಜುಲೈ 1 ರಂದು ಮಧ್ಯಾಹ್ನ 2:30 ಕ್ಕೆ ತೀರ್ಪು ನೀಡಲಿದ್ದಾರೆ.

ಸಿಬಿಐನ ಭ್ರಷ್ಟಾಚಾರ ಪ್ರಕರಣ ಹಾಗೂ ಇಡಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮೇ 6 ರಂದು ಕವಿತಾ ಅವರು ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಅಬಕಾರಿ ಪ್ರಕರಣದ 50 ಆರೋಪಿಗಳ ಪೈಕಿ ಕವಿತಾ ಅವರು ಏಕೈಕ ಮಹಿಳೆಯಾಗಿದ್ದು, ಅವರಿಗೆ ಜಾಮೀನು ನೀಡಬೇಕು ಎಂದು ಕವಿತಾ ಪರ ವಕೀಲರು ಮನವಿ ಮಾಡಿದ್ದಾರೆ. ಆದರೆ ಆರೋಪಿ ಮಹಿಳೆ ಹೆಚ್ಚು ಪ್ರಭಾವಿಯಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರುವಷ್ಟು ಶಕ್ತಿಶಾಲಿಯಾಗಿದ್ದಾರೆ ಎಂದು ಹೇಳುವ ಮೂಲಕ ಸಿಬಿಐ ಮತ್ತು ಇಡಿ, ಅವರ ಜಾಮೀನು ಅರ್ಜಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?