ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ದೇಶ

ಜೈಲಿನಿಂದ ಬಿಡುಗಡೆಯಾದ ಎರಡೇ ದಿನಕ್ಕೆ ಮತ್ತೆ ಕಾಶ್ಮೀರ ಪತ್ರಕರ್ತ ಬಂಧನ!

Nagaraja AB

ಶ್ರೀನಗರ: ಐದು ವರ್ಷಗಳ ಜೈಲುವಾಸದಿಂದ ಬಿಡುಗಡೆಯಾದ ಎರಡೇ ದಿನಕ್ಕೆ ಮತ್ತೊಂದು ಪ್ರಕರಣದಲ್ಲಿ ಕಾಶ್ಮೀರಿ ಪತ್ರಕರ್ತ ಆಸಿಫ್ ಸುಲ್ತಾನ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಸುಲ್ತಾನ್ ಅವರನ್ನು ಗುರುವಾರ ತಡರಾತ್ರಿ ಮತ್ತೆ ಬಂಧಿಸಲಾಗಿದೆ" ಎಂದು ಅವರು ಮಾಹಿತಿ ನೀಡಿದ್ದಾರೆ.

ಆಸಿಫ್ ಸುಲ್ತಾನ್ ಸ್ಥಳೀಯ ನಿಯತಕಾಲಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾಗ ಸೆಪ್ಟೆಂಬರ್ 2018 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ ಪ್ರಕರಣದಲ್ಲಿ ಅವರನ್ನು ಮೊದಲ ಬಾರಿಗೆ ಬಂಧಿಸಲಾಯಿತು. "ನಿಷೇಧಿತ ಉಗ್ರಗಾಮಿ ಗುಂಪಿಗೆ ಬೆಂಬಲ ನೀಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು. ಆದರೆ, ಯಾವುದೇ ಉಗ್ರಗಾಮಿ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬುದನ್ನು ಸಾಬೀತುಪಡಿಸುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿವೆ ಎಂದು

ಏಪ್ರಿಲ್ 2022 ರಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಅವರಿಗೆ ಜಾಮೀನು ನೀಡಿತು. ಆದಾಗ್ಯೂ, ಕೆಲ ದಿನಗಳ ಬಳಿಕ ಅವರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿತ್ತು.

ಮಂಗಳವಾರ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಗೊಂಡ ಅವರು ಗುರುವಾರ ಮನೆಗೆ ತಲುಪಿದ್ದರು. ಆದರೆ, ಅದೇ ರಾತ್ರಿ ಮನೆಗೆ ಮರಳಿದ ನಂತರ ಮತ್ತೊಂದು ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರಿಂದ ಕುಟುಂಬದವರ ಸಂತಸ ಅಲ್ಪಕಾಲಿಕವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT