ಸಂತನ್
ಸಂತನ್ 
ದೇಶ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಮೃತದೇಹ ಶ್ರೀಲಂಕಾಕ್ಕೆ ರವಾನೆ

Ramyashree GN

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಶ್ರೀಲಂಕಾದ ಪ್ರಜೆ ಸಂತನ್ ಅವರ ಮೃತದೇಹವನ್ನು ಅಂತಿಮ ವಿಧಿವಿಧಾನಗಳಿಗಾಗಿ ಶುಕ್ರವಾರ ಇಲ್ಲಿಂದ ಶ್ರೀಲಂಕಾಕ್ಕೆ ಕೊಂಡೊಯ್ಯಲಾಯಿತು ಎಂದು ಅವರ ವಕೀಲ ಪುಗಜೆಂಧಿ ತಿಳಿಸಿದ್ದಾರೆ.

ಶವಪೆಟ್ಟಿಗೆಯಲ್ಲಿ ಇರಿಸಲಾಗಿದ್ದ ದೇಹವನ್ನು ಇಲ್ಲಿ ಭಾರಿ ಪೊಲೀಸ್ ಭದ್ರತೆಯ ನಡುವೆ ದ್ವೀಪ ರಾಷ್ಟ್ರಕ್ಕೆ ವಿಮಾನದಲ್ಲಿ ಕಳುಹಿಸಲಾಯಿತು.

ಸಂತನ್ ಅವರ ಪಾರ್ಥಿವ ಶರೀರವನ್ನು ಶ್ರೀಲಂಕಾದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗುವುದು ಎಂದು ಅವರ ವಕೀಲ ಪುಗಜೆಂಧಿ ತಿಳಿಸಿದ್ದಾರೆ.

ಹೃದಯಾಘಾತದಿಂದ ಇಲ್ಲಿನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಫೆಬ್ರುವರಿ 28ರಂದು ಮುಂಜಾನೆ ನಿಧನರಾದ ನಂತರ ಅಧಿಕಾರಿಗಳು ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಸಂತನ್ ಅವರ ಪಾರ್ಥಿವ ಶರೀರವನ್ನು ಹಸ್ತಾಂತರಿಸಿದರು.

ಅವರು ಕ್ರಿಪ್ಟೋಜೆನಿಕ್ ಸಿರೋಸಿಸ್‌ನಿಂದ ಬಳಲುತ್ತಿದ್ದರು. ಜನವರಿ 27 ರಂದು ಅವರನ್ನು ಚಿಕಿತ್ಸೆಗಾಗಿ ಆರ್‌ಜಿಜಿಜಿಎಚ್‌ಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿತ್ತು, ತಿರುಚ್ಚಿಯ ಮಹಾತ್ಮ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಯಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿತ್ತು ಎಂದು ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ಸಂತನ್ ಅವರ ಮೃತದೇಹವನ್ನು ಶ್ರೀಲಂಕಾಕ್ಕೆ ಕಳುಹಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮದ್ರಾಸ್ ಹೈಕೋರ್ಟ್ ಗುರುವಾರ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

2022ರಲ್ಲಿ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಲು ಆದೇಶಿಸಿದ 32 ವರ್ಷಗಳಿಗೂ ಹೆಚ್ಚು ಕಾಲ ಜೈಲುವಾಸ ಅನುಭವಿಸಿ ವಿವಿಧ ಜೈಲುಗಳಿಂದ ನಳಿನಿ ಶ್ರೀಹರನ್, ಶ್ರೀಹರನ್ ಅಲಿಯಾಸ್ ಮುರುಗನ್, ರಾಬರ್ಟ್ ಪಯಸ್, ರವಿಚಂದ್ರನ್ ಮತ್ತು ಜಯಕುಮಾರ್ ಅವರೊಂದಿಗೆ ಬಿಡುಗಡೆಯಾಗಿದ್ದರು.

SCROLL FOR NEXT