ವಿಕ್ರಮಾದಿತ್ಯ
ವಿಕ್ರಮಾದಿತ್ಯ ANI
ದೇಶ

ಹಿಮಾಚಲ ಪ್ರದೇಶ: ಬಂಡಾಯ ಶಾಸಕರ ಜೊತೆಗೆ ಮಾತುಕತೆ ಬಳಿಕ ಖರ್ಗೆ ಭೇಟಿಯಾಗಲಿರುವ ವಿಕ್ರಮಾದಿತ್ಯ!

Nagaraja AB

ಶ್ಲಿಮಾ: ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಶುಕ್ರವಾರ ದೆಹಲಿಗೆ ತೆರಳುವ ಮಾರ್ಗದಲ್ಲಿ ಹರಿಯಾಣದ ಪಂಚಕುಲದಲ್ಲಿ ರಾಜ್ಯದ ಆರು ಅನರ್ಹ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿದ್ದಾರೆ. ಬಳಿಕ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಶಿಮ್ಲಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್, ಕೆಲ ಬಂಡಾಯ ಶಾಸಕರು ತಮ್ಮನ್ನು ಸಂಪರ್ಕಿಸಿದ್ದು, ಪಕ್ಷಕ್ಕೆ ಮರಳಲು ಬಯಸಿದ್ದಾರೆ ಎಂದು ವಿಕ್ರಮಾದಿತ್ಯ ಸಿಂಗ್ ಗುರುವಾರ ತಿಳಿಸಿದರು.

"ಈ ಬಂಡಾಯ ಶಾಸಕರು ಮತ್ತು ಕಾಂಗ್ರೆಸ್ ಕೇಂದ್ರ ನಾಯಕತ್ವದೊಂದಿಗೆ ಮಾತನಾಡಲು ನಾನು ವಿಕ್ರಮಾದಿತ್ಯ ಸಿಂಗ್‌ಗೆ ಹೇಳಿದ್ದೇನೆ" ಎಂದು ಮುಖ್ಯಮಂತ್ರಿ ಹೇಳಿದರು.

ವಿಕ್ರಮಾದಿತ್ಯ ಸಿಂಗ್ ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದು, ಯಾವ ಬೆಳವಣಿಗೆ ನಡೆಯುತ್ತದೆ ಎಂಬುದನ್ನು ನೋಡುತ್ತೇವೆ. ಆದರೆ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶದ ಏಕೈಕ ಸ್ಥಾನಕ್ಕೆ ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಬಂಡಾಯ ಶಾಸಕರು ಅಡ್ಡ ಮತದಾನ ಮಾಡುವ ಮೂಲಕ ಪಕ್ಷದ ಅಧಿಕೃತ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಸೋಲಿಗೆ ಕಾರಣರಾಗಿದ್ದರು. ಇದರಿಂದ ರಾಜಕೀಯ ಬಿಕ್ಕಟ್ಟು ತಲೆದೋರಿತ್ತು.

ಪಕ್ಷದ ಕೇಂದ್ರ ನಾಯಕತ್ವ ಕಾಂಗ್ರೆಸ್ ಶಾಸಕರೊಂದಿಗೆ ಮಾತನಾಡಲು ವೀಕ್ಷಕರ ತಂಡವನ್ನು ಕಳುಹಿಸಿತು. ಈ ಮಧ್ಯೆ ವಿಧಾನಸಭೆಯಲ್ಲಿ ರಾಜ್ಯ ಬಜೆಟ್‌ಗೆ ಮತ ಚಲಾಯಿಸಲು ಪಕ್ಷದ ವಿಪ್ ಅನ್ನು ಧಿಕ್ಕರಿಸಿದ ಆರೋಪದ ಮೇಲೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಆರು ಶಾಸಕರನ್ನು ಅನರ್ಹಗೊಳಿಸಿದರು. ಅಡ್ಡ ಮತದಾನದ ನಂತರರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರು ಸಂಪುಟಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು ಆದರೆ ವೀಕ್ಷಕರೊಂದಿಗಿನ ಸಭೆಯ ನಂತರ ತಮ್ಮ ನಿಲುವನ್ನು ಬದಲಾಯಿಸಿಕೊಂಡರು.

SCROLL FOR NEXT