ಜಯಂತ್ ಸಿನ್ಹಾ 
ದೇಶ

ಗೌತಮ್ ಗಂಭೀರ್ ನಂತರ ಬಿಜೆಪಿಯ ಜಯಂತ್ ಸಿನ್ಹಾ ಸಹ ರಾಜಕೀಯದಿಂದ ನಿವೃತ್ತಿ

ಭಾರತೀಯ ಜನತಾ ಪಕ್ಷದ ಮತ್ತೊಬ್ಬ ಸಂಸದ ಜಯಂತ್ ಸಿನ್ಹಾ ಅವರು ಚುನಾವಣಾ ಕರ್ತವ್ಯಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಶನಿವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವಿನಂತಿಸಿದ್ದಾರೆ.

ನವದೆಹಲಿ: ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ರಾಜಕೀಯಕ್ಕೆ ವಿದಾಯ ಹೇಳಿದ ಬೆನ್ನಲ್ಲೇ ಭಾರತೀಯ ಜನತಾ ಪಕ್ಷದ ಮತ್ತೊಬ್ಬ ಸಂಸದ ಜಯಂತ್ ಸಿನ್ಹಾ ಅವರು ಚುನಾವಣಾ ಕರ್ತವ್ಯಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಶನಿವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ವಿನಂತಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಜಿ ಕೇಂದ್ರ ಸಚಿವ ಜಯಂತ್ ಸಿನ್ಹಾ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹಲವು ಹೊಸ ನಾಯಕರಿಗೆ ಟಿಕೆಟ್ ನೀಡಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಟಿಕೆಟ್ ಕೈ ತಪ್ಪುವ ಸೂಚನೆ ಸಿಕ್ಕ ಕೆಲವು ಹಾಲಿ ಸಂಸದರು ಪಕ್ಷ ಸಂಘಟನೆಯಂತಹ ಇತರ ಕೆಲಸಗಳತ್ತ ಗಮನ ಹರಿಸಲು ಮುಂದಾಗಿದ್ದಾರೆ.

ನಾನು ಚುನಾವಣಾ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಇದರಿಂದಾಗಿ ನಾನು ಭಾರತ ಮತ್ತು ಪ್ರಪಂಚದಾದ್ಯಂತ ಜಾಗತಿಕ ಹವಾಮಾನ ಬದಲಾವಣೆಯನ್ನು ಎದುರಿಸುವ ಕೆಲಸಗಳಲ್ಲಿ ನನ್ನ ಪ್ರಯತ್ನಗಳನ್ನು ಕೇಂದ್ರೀಕರಿಸುತ್ತೇನೆ ಎಂದು ಸಿನ್ಹಾ ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಪೂರ್ವ ದೆಹಲಿ ಸಂಸದ ಗೌತಮ್ ಗಂಭೀರ್ ಅವರು ತಮ್ಮ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸಲು, ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಬಿಜೆಪಿ ಅಧ್ಯಕ್ಷರಿಗೆ ಕೇಳಿಕೊಂಡಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ