ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ದೇಶ

ಈ ವರ್ಷ ಬೇಸಿಗೆ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ

Nagaraja AB

ನವದೆಹಲಿ: ಎಲ್‌ನಿನೋದಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ಈ ವರ್ಷ ಬೇಸಿಗೆ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.

ಮಾರ್ಚ್ ಮತ್ತು ಮೇ ನಡುವೆ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಗರಿಷ್ಠ ಮತ್ತು ಕನಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಬಹುದು ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.

ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕದ ಭಾಗಗಳು, ಮಹಾರಾಷ್ಟ್ರ ಮತ್ತು ಒಡಿಶಾದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ಮತ್ತು ಹೆಚ್ಚಿನ ತಾಪಮಾನಕ್ಕೆ ಸಾಕ್ಷಿಯಾಗಬಹುದು. ಆದರೆ ಮಾರ್ಚ್‌ನಲ್ಲಿ ಉತ್ತರ ಮತ್ತು ಮಧ್ಯ ಭಾರತದಲ್ಲಿ ಬಿಸಿಗಾಳಿ ಪರಿಸ್ಥಿತಿಗಳನ್ನು ನಿರೀಕ್ಷಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಎಲ್ ನಿನೊ ಪೂರ್ವ ಪೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ನೀರಿನ ಅಸಾಮಾನ್ಯ ತಾಪಮಾನವನ್ನು ಸೂಚಿಸುತ್ತದೆ. ಭಾರತದಲ್ಲಿ, ಎಲ್ ನಿನೊ ದುರ್ಬಲ ಮಾನ್ಸೂನ್‌ಗೆ ಹೆಸರುವಾಸಿಯಾಗಿದೆ. ಆದಾಗ್ಯೂ, ಮಾನ್ಸೂನ್ ಋತುವಿನ ಆರಂಭದ ವೇಳೆಗೆ ಎಲ್ ನಿನೊದಿಂದ ತಟಸ್ಥ ಪರಿಸ್ಥಿತಿಗಳಿಗೆ ಪರಿವರ್ತನೆಯನ್ನು ಐಎಂಡಿ ನಿರೀಕ್ಷಿಸುತ್ತದೆ. ಇದು ನೈಋತ್ಯ ಮಾನ್ಸೂನ್ ಸಮಯದಲ್ಲಿ ಹೆಚ್ಚು ಮಳೆಯನ್ನು ತರಬಹುದು. ಮಾರ್ಚ್ ಬಿಸಿಯಾಗಿರುತ್ತದೆ ಆದರೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಅದು ರಾಬಿ ಗೋಧಿ ಬೆಳೆಗೆ ವರದಾನವಾಗಬಹುದು.

SCROLL FOR NEXT