ಗೌತಮ್ ಗಂಭೀರ್
ಗೌತಮ್ ಗಂಭೀರ್ 
ದೇಶ

ರಾಜಕೀಯಕ್ಕೆ ಗೌತಮ್ ಗಂಭೀರ್ ಗುಡ್ ಬೈ; ಮತ್ತೆ ಕ್ರಿಕೆಟ್ ನತ್ತ ಚಿತ್ತ!

Nagaraja AB

ನವದೆಹಲಿ: ಬಿಜೆಪಿ ಸಂಸದ ಗೌತಮ್ ಗಂಭೀರ್ ಶನಿವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ವಿನಂತಿಸಿದ್ದು, ಮತ್ತೆ ಕ್ರಿಕೆಟ್ ನತ್ತ ಗಮನ ಹರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಪೂರ್ವ ದೆಹಲಿಯ ಸಂಸದನಾಗಿ ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಗಂಭೀರ್, "ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ, ಇದರಿಂದಾಗಿ ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ನಾನು ಗಮನಹರಿಸಬಹುದು. ನನಗೆ ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಗಿ ಧನ್ಯವಾದ ಸಲ್ಲಿಸುತ್ತೇನೆ. ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಾಂದಿನಿ ಚೌಕ್, ಈಶಾನ್ಯ ದೆಹಲಿ, ಪೂರ್ವ ದೆಹಲಿ, ವಾಯವ್ಯ ದೆಹಲಿ, ನವದೆಹಲಿ, ಪಶ್ಚಿಮ ದೆಹಲಿ ಮತ್ತು ದಕ್ಷಿಣ ದೆಹಲಿಯನ್ನೊಳಗೊಂಡ ಏಳು ಲೋಕಸಭಾ ಕ್ಷೇತ್ರಗಳಿದ್ದು, ಅವೆಲ್ಲಾವೂ ಬಿಜೆಪಿ ವಶದಲ್ಲಿದೆ. ಬಿಜೆಪಿ ಈ ಬಾರಿ ಹೊಸ ಮುಖಗಳನ್ನು ಪರಿಚಯಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ವಾಯವ್ಯ ದೆಹಲಿಯ ಹಾಲಿ ಸಂಸದ ಹನ್ಸ್ ರಾಜ್ ಹನ್ಸ್ ಮತ್ತು ಚಾಂದಿನಿ ಚೌಕ್ ಸಂಸದ ಡಾ.ಹರ್ಷ್ ವರ್ಧನ್ ಅವರನ್ನು ಪಕ್ಷವು ಬದಲಿಸಬಹುದು ಎಂದು ನಿರೀಕ್ಷಿಸಲಾಗಿದೆ. 2024ರ ಲೋಕಸಭೆ ಚುನಾವಣೆಗೆ 100ಕ್ಕೂ ಹೆಚ್ಚು ಹೆಸರುಗಳನ್ನು ಒಳಗೊಂಡ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಸಂಜೆ ಬಿಡುಗಡೆ ಮಾಡುವ ಸಾಧ್ಯತೆಯಿದೆ.

SCROLL FOR NEXT