ಸಾಂದರ್ಭಿಕ ಚಿತ್ರ 
ದೇಶ

ಥಾಣೆ: ಧಾರ್ಮಿಕ ಕ್ರಿಯೆಗಳ ನೆಪದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಸ್ವಯಂಘೋಷಿತ ದೇವಮಾನವನ ಬಂಧನ

ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ಥಾಣೆ: ಶ್ರೀಮಂತರಾಗಲು ಬಯಸುವ ಜನರಿಗೆ ಧಾರ್ಮಿಕ ಕ್ರಿಯೆಗಳನ್ನು ನಡೆಸುವ ನೆಪದಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಥಾಣೆ ಅಪರಾಧ ವಿಭಾಗದ ಪೊಲೀಸರು ಶನಿವಾರ ತಿಳಿಸಿದ್ದಾರೆ.

ರಾಬೋಡಿಯಿಂದ 15 ವರ್ಷದ ಬಾಲಕಿ ನಾಪತ್ತೆಯಾದ ನಂತರ ದಾಖಲಾದ ಅಪಹರಣ ಪ್ರಕರಣದ ತನಿಖೆಯ ವೇಳೆ ಈ ಸೆಕ್ಸ್ ದಂಧೆ ಬಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ವೇಳೆ ಫೆಬ್ರವರಿ 25 ರಂದು ಅಸ್ಲಂ ಖಾನ್ ಮತ್ತು ಸಲೀಂ ಶೇಖ್ ಎಂದು ಗುರುತಿಸಲಾದ ಇಬ್ಬರನ್ನು ಬಂಧಿಸಲಾಗಿತ್ತು. ಕೆಲ ಸಮಯದ ನಂತರ ಆರೋಪಿಗಳ ನೀಡಿದ ಮಾಹಿತಿ ಆಧರಿಸಿ ಪ್ರಮುಖ ಆರೋಪಿ ಸಾಹೇಬ್ ಲಾಲ್ ವಜೀರ್ ಶೇಖ್ ಅಲಿಯಾಸ್ ಯೂಸುಫ್ ಬಾಬಾ ನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

"ಯೂಸುಫ್ ಬಾಬಾ ಮತ್ತು ಆತನ ಸಹಚರರು ಮಾಟಮಂತ್ರದ ಮೂಲಕ ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರಿಗೆ ಶ್ರೀಮಂತರನ್ನಾಗಿ ಮಾಡುವ ಭರವಸೆ ನೀಡಿ, ಸೆಕ್ಸ್ ದಂಧಗೆ ಬಳಸಿಕೊಳ್ಳಲಾಗಿದೆ ಎಂದು ನಮ್ಮ ತನಿಖೆಯಿಂದ ತಿಳಿದು ಬಂದಿದೆ. ಕೆಲವು ಧಾರ್ಮಿಕ ಆಚರಣೆಗಳಲ್ಲಿ ಮಹಿಳೆಯರು ನಗ್ನವಾಗಿ ಭಾಗವಹಿಸಬೇಕು ಎಂದು ಹೇಳಲಾಗಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳ ಮೊಬೈಲ್ ಫೋನ್‌ಗಳಿಂದ ಈ ಆಚರಣೆಗಳ ಹಲವಾರು ಆಕ್ಷೇಪಾರ್ಹ ವೀಡಿಯೊಗಳು ಮತ್ತು ಇತರ ದೋಷಾರೋಪಣೆಯ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.

"ಇಬ್ಬರು ಮಹಿಳೆಯರನ್ನು ಒಳಗೊಂಡಿರುವ ಈ ಗ್ಯಾಂಗ್ ಕನಿಷ್ಠ 17 ಜನರನ್ನು ಬಲೆಗೆ ಬೀಳಿಸಿದೆ. ಥಾಣೆ, ಪಾಲ್ಘರ್‌ನ ವಸಾಯಿ ಮತ್ತು ನೆರೆಯ ಮುಂಬೈನಿಂದ ಏಳು ಮಂದಿಯನ್ನು ಬಂಧಿಸಲಾಗಿದೆ" ಎಂದು ಥಾಣೆ ಕ್ರೈಂ ಬ್ರಾಂಚ್ ಘಟಕದ ಇನ್ಸ್‌ಪೆಕ್ಟರ್ ಕೃಷ್ಣ ಕೊಕ್ನಿ ಅವರು ತಿಳಿಸಿದ್ದಾರೆ.

ಈ ಸಂಬಂಧ ರಬೋಡಿ ಪೊಲೀಸ್ ಠಾಣೆಯಲ್ಲಿ ಅಪಹರಣ, ಅತ್ಯಾಚಾರ, ವಂಚನೆ ಮತ್ತು ಐಪಿಸಿ ಇತರ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ದಂಧೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT