rape
rape 
ದೇಶ

ಪತಿಯೊಂದಿಗೆ ಬೈಕ್ ಪ್ರವಾಸ ಕೈಗೊಂಡಿದ್ದ ಸ್ಪ್ಯಾನಿಶ್ ಮಹಿಳೆ ಮೇಲೆ ಜಾರ್ಖಂಡ್ ನಲ್ಲಿ ಸಾಮೂಹಿಕ ಅತ್ಯಾಚಾರ!

Srinivas Rao BV

ಜಾರ್ಖಂಡ್: ಪತಿಯೊಂದಿಗೆ ಬೈಕ್ ಪ್ರವಾಸ ಕೈಗೊಂಡಿದ್ದ ಸ್ಪೇನ್ ಪ್ರವಾಸಿ ಮಹಿಳೆಯ ಮೇಲೆ ಜಾರ್ಖಂಡ್ ನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.

ದುಮ್ಕಾ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಪ್ರವಾಸದಲ್ಲಿದ್ದ ದಂಪತಿ ರಾತ್ರಿ ನಿರ್ಜನ ಸ್ಥಳದಲ್ಲಿ ತಾತ್ಕಾಲಿಕ ಟೆಂಟ್ ನಲ್ಲಿದ್ದಾಗ ಈ ಘಟನೆ ನಡೆದಿದೆ. ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಪ್ರವಾಸಿ ದಂಪತಿ, ದುಮ್ಕಾ ಮೂಲಕ ಬಿಹಾರದ ಭಾಗಲ್ಪುರಕ್ಕೆ ತೆರಳುವವರಿದ್ದರು. ಮಾರ್ಗ ಮಧ್ಯೆ ಹನ್ಸ್ದಿಹಾ ಮಾರುಕಟ್ಟೆಯ ಬಳಿ ತಂಗಿದ್ದಾಗ ಈ ಘಟನೆ ನಡೆದಿದೆ. ಅವರು ದ್ವಿಚಕ್ರ ವಾಹನದಲ್ಲಿ ಬಾಂಗ್ಲಾದೇಶದಿಂದ ದುಮ್ಕಾ ತಲುಪಿ ಬಿಹಾರ ಮೂಲಕ ನೇಪಾಳಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ. ಸಂತ್ರಸ್ತೆಯನ್ನು ಪ್ರಸ್ತುತ ದುಮ್ಕಾದ ಫುಲೋ ಜಾನೋ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT