ಅರ್ಜುನ್ ಮೊದ್ವಾಡಿಯಾ 
ದೇಶ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಜರಾತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊದ್ವಾಡಿಯಾ

ಗುಜರಾತ್ ಪ್ರದೇಶ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರ್ಜುನ್ ಮೊದ್ವಾಡಿಯಾ ಅವರು ಸೋಮವಾರ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸ್ಪೀಕರ್ ಕಚೇರಿ ತಿಳಿಸಿದೆ.

ಗಾಂಧಿನಗರ: ಹಿರಿಯ ಕಾಂಗ್ರೆಸ್ ಶಾಸಕ ಮತ್ತು ಗುಜರಾತ್ ಪ್ರದೇಶ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರ್ಜುನ್ ಮೊದ್ವಾಡಿಯಾ ಅವರು ಸೋಮವಾರ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸ್ಪೀಕರ್ ಕಚೇರಿ ತಿಳಿಸಿದೆ.

ಪೋರಬಂದರ್‌ನ ಶಾಸಕರಾಗಿರುವ ಮೊದ್ವಾಡಿಯಾ ಇಂದು ತಮ್ಮ ರಾಜೀನಾಮೆ ಪತ್ರವನ್ನು ಗಾಂಧಿನಗರದಲ್ಲಿ ಗುಜರಾತ್ ವಿಧಾನಸಭಾ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ಸಲ್ಲಿಸಿದ್ದಾರೆ.

ಚೌಧರಿ ಅವರು ಮೊದ್ವಾಡಿಯಾ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಸ್ಪೀಕರ್ ಕಚೇರಿ ಖಚಿತಪಡಿಸಿದೆ. ಅವರ ರಾಜೀನಾಮೆಯೊಂದಿಗೆ 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಬಲ 14ಕ್ಕೆ ಇಳಿದಿದೆ.

ಗುಜರಾತ್‌ನ ಅತ್ಯಂತ ಹಿರಿಯ ಮತ್ತು ಪ್ರಭಾವಿ ವಿರೋಧ ಪಕ್ಷದ ನಾಯಕರಲ್ಲಿ ಒಬ್ಬರಾದ ಮೊದ್ವಾಡಿಯಾ ಅವರು 2022 ರ ಚುನಾವಣೆಯಲ್ಲಿ ಪೋರಬಂದರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಭಾರಿ ಬಾಬು ಬೋಖಿರಿಯಾ ಅವರ ವಿರುದ್ಧ ಗೆಲುವು ಸಾಧಿಸಿದ್ದರು.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಮಾರ್ಚ್ 7 ರಂದು ಗುಜರಾತ್ ಪ್ರವೇಶಿಸುವ ಕೆಲವು ದಿನಗಳ ಮುನ್ನ ಪಕ್ಷದ ಹಿರಿಯ ನಾಯಕ ರಾಜೀನಾಮೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್