ಎಂ ಕೆ ಸ್ಟಾಲಿನ್(ಸಂಗ್ರಹ ಚಿತ್ರ) 
ದೇಶ

'ಸನಾತನ ಧರ್ಮ ನಿರ್ಮೂಲನೆ'ಗೆ ಉದಯನಿಧಿ ಸ್ಟಾಲಿನ್ ಕರೆ: ಸುಪ್ರೀಂ ಕೋರ್ಟ್ ಛೀಮಾರಿ

ಸನಾತನ ಧರ್ಮವನ್ನು ವಿರೋಧಿಸುವುದು ಮಾತ್ರವಲ್ಲ ಅದನ್ನು "ನಿರ್ಮೂಲನೆ" ಮಾಡಬೇಕು ಎಂದು ಸ್ಟಾಲಿನ್ ಕರೆ ನೀಡಿದ್ದರು.

ನವದೆಹಲಿ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ 'ಸನಾತನ ಧರ್ಮ ನಿರ್ಮೂಲನೆ' ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಛೀಮಾರಿ ಹಾಕಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗಪಡಿಸಿಕೊಂಡ ನಂತರ ಸುಪ್ರೀಂ ಕೋರ್ಟ್‌ಗೆ ಏಕೆ ಅರ್ಜಿ ಸಲ್ಲಿಸಿದ್ದೀರಿ ಎಂದು ಸ್ಟಾಲಿನ್ ಅವರನ್ನು ಪ್ರಶ್ನೆ ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಸ್ಟಾಲಿನ್‌ಗೆ ಅವರು ಸಚಿವರಾಗಿದ್ದು, ಅವರ ಹೇಳಿಕೆಯ ಪರಿಣಾಮಗಳನ್ನು ತಿಳಿದುಕೊಳ್ಳಬೇಕು ಎಂದು ತೀಕ್ಷ್ಮವಾಗಿ ತಿಳಿಸಿದ್ದಾರೆ.

"ನೀವು ಸಂವಿಧಾನದ ಅನುಚ್ಛೇದ 19(1)(ಎ) ಅಡಿಯಲ್ಲಿ ಮತ್ತು ಆರ್ಟಿಕಲ್ 25 ರ ಅಡಿಯಲ್ಲಿ ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತೀರಿ. ಈಗ ನೀವು ಆರ್ಟಿಕಲ್ 32 ರ ಅಡಿಯಲ್ಲಿ (ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು) ನಿಮ್ಮ ಹಕ್ಕನ್ನು ಚಲಾಯಿಸುತ್ತಿದ್ದೀರಾ? ನೀವು ಹೇಳಿದ್ದರ ಪರಿಣಾಮ ಎಷ್ಟರ ಮಟ್ಟಿಗಿದೆ ಎಂದು ಯೋಚಿಸಿದ್ದೀರಾ, ನೀವು ಸಾಮಾನ್ಯ ವ್ಯಕ್ತಿಯಲ್ಲ, ನೀವು ರಾಜ್ಯದ ಮಂತ್ರಿಯಾಗಿದ್ದೀರಿ, ಅದರ ಪರಿಣಾಮಗಳನ್ನು ನೀವೇ ತಿಳಿದುಕೊಳ್ಳಬೇಕು ಎಂದು ಛೀಮಾರಿ ಹಾಕಿದ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಮಾರ್ಚ್ 15ಕ್ಕೆ ಮುಂದೂಡಿದೆ.

ಉದಯನಿಧಿ ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಅವರ ಪುತ್ರ.

ಸೆಪ್ಟೆಂಬರ್ 2023 ರಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದ್ದು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಅದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!