ಪ್ರಾತಿನಿಧಿಕ ಚಿತ್ರ 
ದೇಶ

ಮಧ್ಯಪ್ರದೇಶ: ಛತ್ತರ್‌ಪುರದಲ್ಲಿ ಬಿಎಸ್‌ಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿ

ಮಧ್ಯಪ್ರದೇಶದಲ್ಲಿ ನಡೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕನನ್ನು ರಾಜ್ಯದ ಛತ್ತರ್‌ಪುರ ನಗರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತರ್‌ಪುರ: ಮಧ್ಯಪ್ರದೇಶದಲ್ಲಿ ನಡೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕನನ್ನು ರಾಜ್ಯದ ಛತ್ತರ್‌ಪುರ ನಗರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿ ಸಾಗರ್ ರಸ್ತೆಯ ಬಳಿ ಮಹೇಂದ್ರ ಗುಪ್ತಾ ಅವರ ತಲೆಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಂಘಿ ತಿಳಿಸಿದ್ದಾರೆ.

'ಗುಪ್ತಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ' ಎಂದು ಎಸ್ಪಿ ಹೇಳಿದರು.

ಇಶಾನಗರ ಪಟ್ಟಣದ ನಿವಾಸಿಯಾಗಿರುವ ಗುಪ್ತಾ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜಾವರ್ ಕ್ಷೇತ್ರದಿಂದ ಬಿಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ 10,400 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದಿದ್ದರು.

ಮೋಟಾರ್ ಸೈಕಲ್‌ನಲ್ಲಿ ಬಂದ ವ್ಯಕ್ತಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ತನ್ನ ರೈಫಲ್ ಅನ್ನು ಲೋಡ್ ಮಾಡುವ ಹೊತ್ತಿಗೆ ದಾಳಿಕೋರ ಅಲ್ಲಿಂದ ಪರಾರಿಯಾದನು. ದಾಳಿಕೋರನನ್ನು ನಾನು ನೋಡಿದ್ದು, ಆತನನ್ನು ಗುರುತಿಸಬಲ್ಲೆ ಎಂದು ಗುಪ್ತಾ ಅವರ ಖಾಸಗಿ ಭದ್ರತಾ ಸಿಬ್ಬಂದಿ ಅಬ್ದುಲ್ ಮನ್ಸೂರಿ ಹೇಳಿದರು.

ಘಟನೆ ನಡೆದಾಗ ಬಿಎಸ್‌ಪಿ ನಾಯಕ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಛತ್ತರ್‌ಪುರಕ್ಕೆ ಬಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!