ಕಲ್ಕತ್ತಾ ಹೈಕೋರ್ಟ್ 
ದೇಶ

ಸಂದೇಶಖಾಲಿ ಪ್ರಕರಣ: ಷಹಜಹಾನ್ ಶೇಖ್ ರನ್ನು ಸಿಬಿಐಗೆ ಹಸ್ತಾಂತರಿಸಿ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಉತ್ತರ 24 ಪರಗಣದ ಸಂದೇಶ್‌ಖಾಲಿಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಮೇಲಿನ ದಾಳಿ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದೆ.

ಕೋಲ್ಕತ್ತಾ: ಉತ್ತರ 24 ಪರಗಣದ ಸಂದೇಶ್‌ಖಾಲಿಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಮೇಲಿನ ದಾಳಿ ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಸಿಬಿಐ ತನಿಖೆಗೆ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠ, ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಹಾಗೂ ಪ್ರಮುಖ ಆರೋಪಿ ಷಹಜಹಾನ್ ಶೇಖ್‌ನನ್ನು ಸಂಜೆ 4.30 ರೊಳಗೆ ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸರಿಗೆ ಹೈಕೋರ್ಟ್ ಸೂಚಿಸಿದೆ.

ಪ್ರಕರಣದ ತನಿಖೆಗೆ ಸಿಬಿಐ ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಏಕ ಸದಸ್ಯ ಪೀಠ ನೀಡಿದ್ದ ಆದೇಶವನ್ನೂ ವಿಭಾಗೀಯ ಪೀಠ ರದ್ದುಗೊಳಿಸಿದೆ.

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಪ್ರಾಂತ್ಯದಲ್ಲಿ ಪ್ರಭಾವಿಯಾಗಿರುವ ಟಿಎಂಸಿ ನಾಯಕ ಷಹಜಹಾನ್‌ ಶೇಖ್ ವಿರುದ್ದ ಹಿಂದೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೂಟಿ, ವಸೂಲಿ, ಭೂ ಅತಿಕ್ರಮಣ ಸೇರಿದಂತೆ ಹಲವು ಗಂಭೀರ ಸ್ವರೂಪದ ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಭಾರೀ ತಿಕ್ಕಾಟಕ್ಕೆ ಕಾರಣವಾಗಿದೆ. ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆದ ಬಳಿಕ ಕಳೆದ 60 ದಿನಗಳಿಂದ ಷಹಜಹಾನ್ ಹಿಂದೆ ಬಿದ್ದಿರುವ ಬಿಜೆಪಿ, ಆತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಈ ನಡುವೆ ಬಂಧಿತ ಷಹಜಹಾನ್‌ನನ್ನು ಟಿಎಂಸಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ತಮ್ಮ ಪಕ್ಷ ರಾಜಧರ್ಮ ಮೆರೆದಿದೆ ಎಂದು ಹೇಳಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

ಚುನಾವಣಾ ಆಯೋಗಕ್ಕೆ ಸಲ್ಲಿಸಿದ 89 ಲಕ್ಷ ದೂರುಗಳು ತಿರಸ್ಕೃತ; ಮತ್ತೆ ಎಸ್‌ಐಆರ್ ನಡೆಸಿ: ಕಾಂಗ್ರೆಸ್ ಆಗ್ರಹ

ಉಪ್ಪಾರ ಸಮುದಾಯ STಗೆ ಸೇರ್ಪಡೆ: ಶೀಘ್ರದಲ್ಲೇ ಕೇಂದ್ರಕ್ಕೆ ಶಿಫಾರಸು - ಸಿಎಂ ಸಿದ್ದರಾಮಯ್ಯ

SCROLL FOR NEXT