ವಿಕ್ರಮಾದಿತ್ಯ ಸಿಂಗ್ ಅವರೊಂದಿಗೆ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ
ವಿಕ್ರಮಾದಿತ್ಯ ಸಿಂಗ್ ಅವರೊಂದಿಗೆ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ದೇಶ

ಹಿಮಾಚಲ ಪ್ರದೇಶ: ಅನರ್ಹತೆ ಪ್ರಶ್ನಿಸಿ ಆರು ಕಾಂಗ್ರೆಸ್ ಶಾಸಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ

Nagaraja AB

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ನಂತರ ಅನರ್ಹಗೊಂಡಿರುವ ಆರು ಕಾಂಗ್ರೆಸ್ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಫೆಬ್ರವರಿ 29 ರಂದು ರಾಜ್ಯ ವಿಧಾನಸಭಾ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರ ನಿರ್ಧಾರದ ವಿರುದ್ಧ ಮಾಜಿ ಶಾಸಕರು ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಈ ಕಾಂಗ್ರೆಸ್ ಬಂಡಾಯ ಶಾಸಕರು, ನಂತರ ಪಕ್ಷದ ವಿಪ್ ಉಲ್ಲಂಘಿಸಿ, ಬಜೆಟ್‌ ವೇಳೆ ಮತದಾನದಿಂದ ದೂರವಿದ್ದರು.ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಅವರನ್ನು ಅನರ್ಹಗೊಳಿಸುವಂತೆ ಕೋರಿತ್ತು.

ರಾಜಿಂದರ್ ರಾಣಾ, ಸುಧೀರ್ ಶರ್ಮಾ, ಇಂದರ್ ದತ್ ಲಖನ್‌ಪಾಲ್, ದೇವಿಂದರ್ ಕುಮಾರ್ ಭೂಟೂ, ರವಿ ಠಾಕೂರ್ ಮತ್ತು ಚೆತನ್ಯ ಶರ್ಮಾ ಅನರ್ಹಗೊಂಡ ಶಾಸಕರಾಗಿದ್ದಾರೆ. ಅವರ ಅನರ್ಹತೆಯ ನಂತರ ಸದನದ ಬಲವು 68 ರಿಂದ 62 ಕ್ಕೆ ಇಳಿದಿದೆ. ಆದರೆ ಕಾಂಗ್ರೆಸ್ ಶಾಸಕರ ಸಂಖ್ಯೆ 40 ರಿಂದ 34 ಕ್ಕೆ ಕುಸಿದಿದೆ.

SCROLL FOR NEXT