ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಹೊಸ ದೂರು ದಾಖಲಿಸಿದ ಇಡಿ

ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿದೆ

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಈ ಹೊಸ ದೂರಿನಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರು 4 ರಿಂದ 8 ರವರೆಗಿನ ಸಮನ್ಸ್‌ಗಳನ್ನು ಗೌರವಿಸಿಲ್ಲ ಎಂದು ಇಡಿ ಆರೋಪಿಸಿದೆ.

ಎಸಿಎಂಎಂ ದಿವ್ಯಾ ಮಲ್ಹೋತ್ರಾ ಅವರ ನ್ಯಾಯಾಲಯ, ಗುರುವಾರ ಈ ಹೊಸ ದೂರಿನ ವಿಚಾರಣೆ ನಡೆಸಲಿದೆ.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಮೊದಲ ಮೂರು ಸಮನ್ಸ್‌ಗಳಿಗೆ ಹಾಜರಾಗದ ದೆಹಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಕೋರಿ ಇಡಿ ಈ ಹಿಂದೆ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿತ್ತು. ನ್ಯಾಯಾಲಯ ಮಾರ್ಚ್ 16 ರಂದು ಈ ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡಿದೆ.

55 ವರ್ಷದ ಕೇಜ್ರಿವಾಲ್ ಅವರು ಇಡಿ ತಮಗೆ ನೀಡಿದ ಎಂಟೂ ಸಮನ್ಸ್‌ಗಳು 'ಅಕ್ರಮ' ಎಂದು ಹೇಳಿದ್ದಾರೆ ಮತ್ತು ಮಾರ್ಚ್ 12 ರ ನಂತರ ವಿಡಿಯೋ ಕಾನ್ಫರೆನ್ಸ್ ಮೂಲಕ ತಮ್ಮ ವಿಚಾರಣೆ ನಡೆಸಬಹುದು ಎಂದು ಕೇಂದ್ರ ತನಿಖಾ ಸಂಸ್ಥೆಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್