ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ: ಮೂವರು ಮಕ್ಕಳು ಸೇರಿದಂತೆ ಐದು ಮಂದಿ ಸಾವು

Shilpa D

ಲಕ್ನೋ : ಉತ್ತರ ಪ್ರದೇಶದ ಕಾಕೋರಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಎಲ್‌ಪಿಜಿ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ.

ಕಾಕೋರಿ ಪ್ರದೇಶದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ 10:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕರೋಕ್ರಿಯ ಹತಾ ಹಜರತ್ ಸಾಹೇಬ್ ಕಸ್ಬಾದ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎರಡು ಸಿಲಿಂಡರ್‌ಗಳು ಸ್ಫೋಟಗೊಂಡಿದೆ, ಮನೆಯಲ್ಲಿ ಒಟ್ಟು ಒಂಬತ್ತು ಮಂದಿಯಿದ್ದರು.

ಅದರಲ್ಲಿ ಐವರು ಸಾವನ್ನಪ್ಪಿದ್ದು ಇನ್ನೂ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ ಎಂದು ಲಕ್ನೋ ಪೊಲೀಸರು ಹೇಳಿದ್ದಾರೆ. ಮೃತರನ್ನು ಮುಶೀರ್ (50), ಹುಸ್ನ್ ಬಾನೋ (45), ರೈಯಾ (7), ಉಮಾ (4), ಮತ್ತು ಹಿನಾ (2) ಎಂದು ಗುರುತಿಸಲಾಗಿದೆ.

ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸದ್ದಾರೆ. ಸ್ಥಳೀಯ ಪೊಲೀಸ್ ಪಡೆ ಮತ್ತು ಅಗ್ನಿಶಾಮಕ ದಳದ ತಂಡದ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಯಿತು. ಹೆಚ್ಚಿನ ತನಿಖೆ ನಡೆಯುತ್ತಿದೆ.

SCROLL FOR NEXT