ಪ್ರಧಾನಿ ಮೋದಿ 
ದೇಶ

ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿ ಕಾಶ್ಮೀರಕ್ಕೆ ನಾಳೆ ಪ್ರಧಾನಿ ಮೋದಿ ಭೇಟಿ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ.

ಪ್ರಧಾನಿ ಮೋದಿ ಅವರು ಗುರುವಾರ ಶ್ರೀನಗರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಮತ್ತು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಮೋದಿ ಅವರು ನಾಳೆ ಶ್ರೀನಗರದ ಬಕ್ಷಿ ಕ್ರೀಡಾಂಗಣದಲ್ಲಿ "ವಿಕ್ಷಿತ್ ಭಾರತ್ ವಿಕ್ಷಿತ್ ಜಮ್ಮು ಕಾಶ್ಮೀರ" ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೃಷಿ-ಆರ್ಥಿಕತೆಯನ್ನು ಉತ್ತೇಜಿಸಲು ಸುಮಾರು 5,000 ಕೋಟಿ ರೂಪಾಯಿಗಳ ಉಪಕ್ರಮಗಳನ್ನು ಉದ್ಘಾಟಿಸಲಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿರೋಧ ಪಕ್ಷಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆಗೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಪ್ರಧಾನಿ ಮೋದಿಯವರ ಕಾಶ್ಮೀರ ಭೇಟಿ ರಾಜಕೀಯ ವಲಯದಲ್ಲಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 5, 2019 ರಂದು ಆರ್ಟಿಕಲ್ 370 ಅನ್ನು ರದ್ದುಗೊಳಿಸಿತು ಮತ್ತು ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!