ರಾಹುಲ್ ಗಾಂಧಿ 
ದೇಶ

ಲೋಕಸಭೆ ಚುನಾವಣೆಗೆ ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ: ಯುಪಿ ಕಾಂಗ್ರೆಸ್ ನಾಯಕ

ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 2002ರಿಂದ ಹಲವಾರು ಬಾರಿ ಪ್ರತಿನಿಧಿಸಿರುವ ಕ್ಷೇತ್ರವಾದ ಅಮೇಥಿಯಿಂದಲೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರೊಬ್ಬರು ಬುಧವಾರ ಹೇಳಿದ್ದಾರೆ.

ಅಮೇಥಿ: ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 2002ರಿಂದ ಹಲವಾರು ಬಾರಿ ಪ್ರತಿನಿಧಿಸಿರುವ ಕ್ಷೇತ್ರವಾದ ಅಮೇಥಿಯಿಂದಲೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರೊಬ್ಬರು ಬುಧವಾರ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಸಭೆಯ ನಂತರ ಹಿಂತಿರುಗಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಘಾಲ್, ಅಮೇಥಿಯಿಂದ ರಾಹುಲ್ ಗಾಂಧಿ ಈ ಬಾರಿ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಮತ್ತು ಅವರ ಹೆಸರನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಹೇಳಿದರು.

2002ರಿಂದ 2019ರವರೆಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಮೇಥಿಯನ್ನು ಸಂಸತ್ತಿನಲ್ಲಿ ಪ್ರತಿನಿಧಿಸಿದ್ದರು.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಅವರು ಈಗ ಕೇರಳದ ವಯನಾಡಿನ ಸಂಸದರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಅರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..': ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ; Video

ಚುನಾವಣೆಗೂ ಮುನ್ನ SIRಗೆ ಆತುರ ಏಕೆ?: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ

ಹುಡುಗರು ಒಪ್ತಿಲ್ಲ.. ಮದುವೆ ವಿಳಂಬ, ತಾಯಿ ಅನಾರೋಗ್ಯ: ಹುಸೇನ್ ಸಾಗರ್ ಗೆ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ!

ಬೆಂಗಳೂರಿನ ವಸತಿ ಪ್ರದೇಶದಲ್ಲಿ ಭಾರೀ ಸ್ಫೋಟಕ ಪತ್ತೆ; ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ!

ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

SCROLL FOR NEXT