ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ಇ.ಡಿ ವಿಚಾರಣೆಗೆ ಗೈರು: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಮನ್ಸ್ ಜಾರಿಗೊಳಿಸಿದ ನ್ಯಾಯಾಲಯ

Manjula VN

ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆಗೆ ಗೈರು ಹಾಜರಾಗುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಮಾರ್ಚ್ 16 ರಂದು ನ್ಯಾಯಾಲಯ ಮುಂದೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 8 ಬಾರಿ ವಿಚಾರಣೆಗೆ ಹಾಜರಾಗದೆ ಇರುವ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಬುಧವಾರ(ಮಾ.6) ನ್ಯಾಯಾಲಯದ ಮೆಟ್ಟಿಲೇರಿತ್ತು.

‘ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಅವರು ಸಮನ್ಸ್ ಸಂಖ್ಯೆ 4ರಿಂದ 8ಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ನ್ಯಾಯಾಲಯದ ಎದುರು ದೂರಿತ್ತು. ಈ ದೂರನ್ನು ಆಧರಿಸಿ ದೆಹಲಿ ನ್ಯಾಯಾಲಯ ಅರವಿಂದ್ ಕೇಜ್ರಿವಾಲ್‌ ಅವರಿಗೆ ಹೊಸ ಸಮನ್ಸ್ ಜಾರಿಗೊಳಿಸಿದೆ.

SCROLL FOR NEXT