ಇರ್ಫಾನ್ ಸೋಲಂಕಿ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಸ್ ಪಿ ಶಾಸಕ ಇರ್ಫಾನ್ ಸೋಲಂಕಿ ಮನೆ ಮೇಲೆ ಇಡಿ ದಾಳಿ

ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಲಕ್ನೊ: ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಸೋಲಂಕಿ (44) ಅವರು ಪ್ರಸ್ತುತ ಮಹಾರಾಜ್‌ಗಂಜ್ ಜೈಲಿನಲ್ಲಿದ್ದಾರೆ ಮತ್ತು ಸಿಸಾಮೌ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಹಲವು ಕ್ರಿಮಿನಲ್ ಪ್ರಕರಣಗಳ ಸಂಬಂಧ 2022ರ ಡಿಸೆಂಬರ್‌ನಿಂದ ಮಹಾರಾಜಗಂಗ್ ಜೈಲಿನಲ್ಲಿದ್ದಾರೆ. ಭೂಮಿ ಕಸಿದುಕೊಳ್ಳಲು ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿ, ಅವರ ಮನೆಯನ್ನು ಸೋಲಂಕಿ ಹಾಗೂ ಅವರ ಸಹೋದರ ಸೇರಿ ಸುಟ್ಟು ಹಾಕಿದ್ದರು. ಬಳಿಕ ಪೊಲೀಸರಿಗೆ ಶರಣಾಗಿದ್ದರು. ಬಳಿಕ ಉತ್ತರ ಪ್ರದೇಶ ಗ್ಯಾಂಗ್‌ಸ್ಟರ್ಸ್ ಹಾಗೂ ಸಮಾಜ ಘಾತುಕ ಚಟುವಟಿಕೆ (ನಿಯಂತ್ರಣ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಜೈಲಿನಲ್ಲಿರುವ ಕಾನ್ಪುರ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಮತ್ತು ಅವರ ಸಂಬಂಧಿಕರ ಮನೆ ಮೇಲೆ ಇಡಿ ತಂಡ ಗುರುವಾರ ಮುಂಜಾನೆ ದಾಳಿ ನಡೆಸಿದೆ. ಇಡಿ ತಂಡ ಎಲ್ಲರ ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಿದ್ದು, ಸಿಸಿಟಿವಿ ಸಂಪರ್ಕವನ್ನೂ ಕಡಿತಗೊಳಿಸಿದೆ.

ಮಹಾರಾಜಗಂಜ್ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಅವರ ಸಮಸ್ಯೆಗಳು ಹೆಚ್ಚಾಗುತ್ತಿರುವುದು ಗಮನಾರ್ಹ. ನಕಲಿ ಆಧಾರ್ ಕಾರ್ಡ್ ಪ್ರಕರಣದಲ್ಲಿ ಶಾಸಕರ ವಿರುದ್ಧ ಆರೋಪ ಮಾಡಲಾಗಿದೆ.

ಕಾನ್ಪುರದ ಸಂಸದ-ಶಾಸಕ ಕೆಳ ನ್ಯಾಯಾಲಯವು ಶಾಸಕ ಮತ್ತು ಅವರ ಇಬ್ಬರು ಸೋದರ ಮಾವ ಸೇರಿದಂತೆ ಏಳು ಮಂದಿ ವಿರುದ್ಧ ಆರೋಪಗಳನ್ನು ರೂಪಿಸಿದೆ. ಈಗ ಈ ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 18 ರಂದು ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ