ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಬಿಜೆಪಿಗೆ ಸೇರ್ಪಡೆ Online desk
ದೇಶ

ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಬಿಜೆಪಿಗೆ ಸೇರ್ಪಡೆ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಅಘಾತ ಉಂಟಾಗಿದ್ದು, ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಅಘಾತ ಉಂಟಾಗಿದ್ದು, ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಚೌರಿ ಜೊತೆಗೆ ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇದಿ ಹಾಗೂ ಇನ್ನಿತರ ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಈ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಬೆಳವಣಿಗೆ ಸಂಭವಿಸಿರುವುದು ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಮಾಜಿ ಶಾಸಕರಾದ ಸಂಜಯ್ ಶುಕ್ಲಾ, ಅರ್ಜುನ್ ಪಾಲಯ್ಯ, ವಿಶಾಲ್ ಪಟೇಲ್ ಅವರು ಬಿಜೆಪಿ ಸೇರ್ಪಡೆಗೊಂಡ ನಾಯಕರ ಪಟ್ಟಿಯಲ್ಲಿದ್ದಾರೆ. ಪಚೌರಿ ಅವರನ್ನು ಗಾಂಧಿ ಕುಟುಂಬದ ಆಪ್ತ ಎಂದೇ ಗುರುತಿಸಲಾಗಿತ್ತು, ರಕ್ಷಣಾ ಖಾತೆ ರಾಜ್ಯ ಸಚಿವರಾಗಿ, ನಾಲ್ಕು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಪಚೌರಿ ಕಾರ್ಯನಿರ್ವಹಿಸಿದ್ದರು.

ಪಚೌರಿ ಈ ಹಿಂದೆ ಕಾಂಗ್ರೆಸ್‌ನ ಮಧ್ಯಪ್ರದೇಶ ಘಟಕದ ಅಧ್ಯಕ್ಷ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು.

ಪ್ರಮುಖ ಬುಡಕಟ್ಟು ನಾಯಕರಾದ ರಾಜುಖೇಡಿ ಅವರು 1998, 1999 ಮತ್ತು 2009 ರ ಮೂರು ಅವಧಿಗೆ ಕಾಂಗ್ರೆಸ್ ಟಿಕೆಟ್‌ನಲ್ಲಿ ಧಾರ್ (ಪರಿಶಿಷ್ಟ ಬುಡಕಟ್ಟುಗಳು) ಲೋಕಸಭಾ ಸ್ಥಾನದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್‌ಗೆ ಸೇರುವ ಮೊದಲು ಅವರು 1990 ರಲ್ಲಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!