ಸ್ಟಾಲಿನ್, ರಾಹುಲ್ ಸಾಂದರ್ಭಿಕ ಚಿತ್ರ 
ದೇಶ

ಲೋಕಸಭೆ ಚುನಾವಣೆ: ತಮಿಳುನಾಡು, ಪುದುಚೇರಿಯಲ್ಲಿ ಕಾಂಗ್ರೆಸ್ ಗೆ 10 ಸ್ಥಾನ ಹಂಚಿದ ಡಿಎಂಕೆ

ಮುಂಬರುವ ಲೋಕಸಭಾ ಚುನಾವಣೆಗಾಗಿ ತಮಿಳುನಾಡು ಹಾಗೂ ನೆರೆಯ ಪುದುಚೇರಿಯಲ್ಲಿ 10 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಡಿಎಂಕೆ ಶನಿವಾರ ಹಂಚಿಕೆ ಮಾಡಿದೆ. 2019ರ ಸೀಟು ಹಂಚಿಕೆ ಸೂತ್ರವನ್ನೇ ಪುನಾರಾವರ್ತಿಸಲಾಗಿದೆ.

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಗಾಗಿ ತಮಿಳುನಾಡು ಹಾಗೂ ನೆರೆಯ ಪುದುಚೇರಿಯಲ್ಲಿ 10 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಡಿಎಂಕೆ ಶನಿವಾರ ಹಂಚಿಕೆ ಮಾಡಿದೆ. 2019ರ ಸೀಟು ಹಂಚಿಕೆ ಸೂತ್ರವನ್ನೇ ಪುನಾರಾವರ್ತಿಸಲಾಗಿದೆ.

ದ್ರಾವಿಡ ಪಕ್ಷವು ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ ಒಂಬತ್ತು ಸ್ಥಾನಗಳನ್ನು ನೀಡಿದೆ. ಜೊತೆಗೆ ಪುದುಚೇರಿಯಲ್ಲಿ ಒಂದು ಸ್ಥಾನವನ್ನಷ್ಟೇ ನೀಡಲಾಗಿದೆ.

ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ತಮಿಳುನಾಡು ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಕೆ ಸೆಲ್ವಪೆರುಂತಗೈ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ಅಜೋಯ್ ಕುಮಾರ್ ಅವರ ಸಮ್ಮುಖದಲ್ಲಿ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲಾಯಿತು.

ಸುದ್ದಿಗಾರರ ಜೊತೆಗೆ ಮಾತನಾಡಿದ ವೇಣುಗೋಪಾಲ್, ಡಿಎಂಕೆ ನೇತೃತ್ವದ ಮೈತ್ರಿಕೂಟವು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಎಲ್ಲಾ 40 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು ಮತ್ತು ಕಾಂಗ್ರೆಸ್- ಡಿಎಂಕೆ ನಡುವಿನ 'ಬಾಂಧವ್ಯ ಗಟ್ಟಿಯಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ; Video

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ವಿಸ್ತರಣೆ..!

UPI MDR: ಗ್ರಾಹಕರಿಗೆ ಮತ್ತೊಂದು ತಲೆ ಬಿಸಿ; ಇನ್ನು ಮುಂದೆ ಪೆಟ್ರೋಲ್ ಪಂಪ್ ಗಳಲ್ಲಿ 2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಬಂದ್!

ಕನ್ನಡ ವರ್ಣಮಾಲೆ ಬರೆಯಲು ಬಾರದ ವಿದ್ಯಾರ್ಥಿಗಳ ಕಂಡು ಪ್ರದೀಪ್ ಈಶ್ವರ್ ಶಾಕ್: ಶಾಸಕರ ಸೂಚನೆಯಂತೆ 180 ಶಿಕ್ಷಕರಿಗೆ BEO ನೋಟಿಸ್!