ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಬಿಜೆಪಿ ಕಾರ್ಯಕ್ರಮದಲ್ಲಿ ಕಾಲ್ತುಳಿತ, ಮಹಿಳೆ ದುರ್ಮರಣ

ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಶನಿವಾರ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 65 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಶನಿವಾರ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 65 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗ್ಪುರ ಬಿಜೆಪಿ ನಗರ ಘಟಕ ರೇಶಿಂಬಾಗ್ ಪ್ರದೇಶದ ಕವಿವರ್ಯ ಸುರೇಶ್ ಭಟ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಆಯೋಜಿಸಿದ್ದ ಶಿಬಿರದಲ್ಲಿ ಈ ಘಟನೆ ಸಂಭವಿಸಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಪಾತ್ರೆಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ವಿತರಿಸಲು ಶಿಬಿರ ಆಯೋಜಿಸಲಾಗಿತ್ತು. ಮುಂಜಾನೆ 5 ಗಂಟೆ ಸುಮಾರಿಗೆ ಸ್ಥಳದ ಜನರು ಹೊರಗೆ ಜಮಾಯಿಸಲು ಪ್ರಾರಂಭಿಸಿದರು ಮತ್ತು ಫಲಾನುಭವಿಗಳಿಗೆ ಗೇಟ್‌ ತೆರೆಯುವ ಹೊತ್ತಿಗೆ ಭಾರಿ ಜನಸಂದಣಿಯೇ ಉಂಟಾಯಿತು. ಗುಂಪು ಧಾವಿಸುತ್ತಿದ್ದಂತೆ ಕೆಲವು ಮಹಿಳೆಯರು ಬಿದ್ದು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಕಾಲ್ತುಳಿತದಲ್ಲಿ ಸಿಲುಕಿದ ಸಂತ್ರಸ್ತೆ ಮನುಬಾಯಿ ತುಳಶಿರಾಮ್ ರಜಪೂತ್ ಅವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು. ಇತರ ನಾಲ್ವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಮಹಿಳೆಯರು ಸೇರಿದಂತೆ ಕನಿಷ್ಠ 50 ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದ್ದು, ಘಟನೆ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!