ಐದು ಮರಿಗಳಿಗೆ ಜನ್ಮ ನೀಡಿದ 'ಗಾಮಿನಿ ಚೀತಾ' 
ದೇಶ

ಪ್ರಾಣಿ ಪ್ರಿಯರಿಗೆ ಸಿಹಿ ಸುದ್ದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ 'ಗಾಮಿನಿ ಚೀತಾ'!

ಪ್ರಾಣಿ ಪ್ರಿಯರಿಗೆ ಸಿಹಿ ಸುದ್ದಿಯೊಂದು ಇದ್ದು, ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಐದು ಮರಿಗಳಿಗೆ ಜನ್ಮ ನೀಡಿದೆ.

ಭೋಪಾಲ್: ಪ್ರಾಣಿ ಪ್ರಿಯರಿಗೆ ಸಿಹಿ ಸುದ್ದಿಯೊಂದು ಇದ್ದು, ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಐದು ಮರಿಗಳಿಗೆ ಜನ್ಮ ನೀಡಿದೆ.

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಭಾನುವಾರ ಐದು ಮರಿಗಳಿಗೆ ಜನ್ಮ ನೀಡಿದ್ದು, ದೇಶದ ಒಟ್ಟು ಚೀತಾಗಳ ಸಂಖ್ಯೆ ಇದೀಗ 26 ಕ್ಕೆ ಏರಿದೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್, "ಹೈ ಫೈವ್, ಕುನೋ! ದಕ್ಷಿಣ ಆಫ್ರಿಕಾದ ತ್ಸ್ವಾಲು ಕಲಹರಿ ರಿಸರ್ವ್‌ನಿಂದ ತರಲಾದ ಸುಮಾರು 5 ವರ್ಷ ವಯಸ್ಸಿನ ಹೆಣ್ಣು ಚಿರತೆ ಗಾಮಿನಿ ಇಂದು 5 ಮರಿಗಳಿಗೆ ಜನ್ಮ ನೀಡಿದೆ. ಭಾರತದಲ್ಲಿ ಜನಿಸಿದ ಚೀತಾ ಮರಿಗಳ ಸಂಖ್ಯೆ ಈಗ 13ಕ್ಕೆ ಏರಿಕೆಯಾಗಿದೆ ಎಂದು ಸಚಿವರು ಹೇಳಿದರು.

ಅಲ್ಲದೆ ಇದು ಭಾರತದ ನೆಲದಲ್ಲಿ ಮರಿಗಳಿಗೆ ಜನ್ಮ ನೀಡಿದ ನಾಲ್ಕನೇ ಚೀತಾ ಮತ್ತು ದಕ್ಷಿಣ ಆಫ್ರಿಕಾದಿಂದ ತರಲಾದ ಚೀತಾಗಳ ಪೈಕಿ ಮರಿಗಳಿಗೆ ಜನ್ಮ ನೀಡಿದ ಮೊದಲ ಚೀತಾ ಆಗಿದೆ.

"ವಿಶೇಷವಾಗಿ ಅರಣ್ಯಾಧಿಕಾರಿಗಳು, ಪಶುವೈದ್ಯರು ಮತ್ತು ಕ್ಷೇತ್ರ ಸಿಬ್ಬಂದಿಗಳ ತಂಡವು ಚಿರತೆಗಳಿಗೆ ಒತ್ತಡ ರಹಿತ ವಾತಾವರಣವನ್ನು ಖಾತ್ರಿಪಡಿಸಿದವರಿಗೆ ಅಭಿನಂದನೆಗಳು, ಇದು ಯಶಸ್ವಿ ಸಂಯೋಗ ಮತ್ತು ಮರಿಗಳ ಜನನಕ್ಕೆ ಕಾರಣವಾಯಿತು. ಕುನೋದಲ್ಲಿ ಮರಿಗಳೂ ಸೇರಿದಂತೆ ಒಟ್ಟು ಚೀತಾಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಗಾಮಿನಿಯ ಪರಂಪರೆಯು ಮುಂದೆ ಸಾಗುತ್ತಿದೆ: ತನ್ನ ಮುದ್ದಾಗಿರುವ ಮರಿಗಳನ್ನು ಪರಿಚಯಿಸುತ್ತಿದೆ ಎಂದು ಕೇಂದ್ರ ಸಚಿವರು ಟ್ವೀಟ್ ಮಾಡಿದ್ದಾರೆ.

ಮಹತ್ವಾಕಾಂಕ್ಷೆಯ ಚೀತಾ ಮರುಪರಿಚಯ ಯೋಜನೆಯಡಿ, ಐದು ಹೆಣ್ಣು ಮತ್ತು ಮೂರು ಗಂಡುಗಳನ್ನು ಒಳಗೊಂಡ ಎಂಟು ನಮೀಬಿಯಾದ ಚೀತಾಗಳನ್ನು 2022 ರ ಸೆಪ್ಟೆಂಬರ್ 17 ರಂದು ಕುನೋ ರಾಷ್ಟ್ರೀಯ ಉದ್ಯಾನವನದ ಆವರಣಕ್ಕೆ ಬಿಡುಗಡೆ ಮಾಡಲಾಯಿತು. ಫೆಬ್ರವರಿ 2023 ರಲ್ಲಿ, ದಕ್ಷಿಣ ಆಫ್ರಿಕಾದಿಂದ ಇನ್ನೂ 12 ಚಿರತೆಗಳನ್ನು ಉದ್ಯಾನವನಕ್ಕೆ ತರಲಾಯಿತು. ಗಾಮಿನಿ ದಕ್ಷಿಣ ಆಫ್ರಿಕಾದಿಂದ ತಂದ ಗುಂಪಿನ ಭಾಗವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT