ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಟಿಎಂಸಿ; ಕ್ರಿಕೆಟಿಗ ಯೂಸುಫ್ ಪಠಾಣ್, ಕೃಷ್ಣನಗರದಿಂದ ಮಹುವಾ ಮೊಯಿತ್ರಾ ಕಣಕ್ಕೆ

Ramyashree GN

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಭಾನುವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ.

ಈ ಬಾರಿಯ ಲೋಕಸಭೆ ಚುನಾವಣೆಗೆ ಪಕ್ಷವು 16 ಹಾಲಿ ಸಂಸದರನ್ನು ಮತ್ತು 12 ಮಹಿಳೆಯರನ್ನು ಕಣಕ್ಕಿಳಿಸಿದೆ.

ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದರೆ, ಕೀರ್ತಿ ಆಜಾದ್ ಅವರು ಬರ್ಧಮಾನ್-ದುರ್ಗಾಪುರ ಕ್ಷೇತ್ರದಿಂದ ಟಿಎಂಸಿ ಟಿಕೆಟ್‌ನಲ್ಲಿ ಸ್ಪರ್ಧಿಸಲಿದ್ದಾರೆ.

ಸಂದೇಶ್‌ಖಾಲಿಯ ಬಸಿರ್ಹತ್ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಹಾಲಿ ಸಂಸದೆ ನುಸ್ರತ್ ಜಹಾನ್ ಅವರನ್ನು ಕೈಬಿಟ್ಟಿದ್ದು, ಮಾಜಿ ಸಂಸದ ಹಾಜಿ ನೂರುಲ್ ಇಸ್ಲಾಂ ಅವರನ್ನು ಕಣಕ್ಕಿಳಿಸಿದೆ.

ಟಿಎಂಸಿ ಸತತ ಎರಡನೇ ಅವಧಿಗೆ ಲೋಕಸಭೆ ಚುನಾವಣೆಯಲ್ಲಿ ಕೃಷ್ಣನಗರ ಲೋಕಸಭಾ ಕ್ಷೇತ್ರಕ್ಕೆ ಮಹುವಾ ಮೊಯಿತ್ರಾ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಮೊಯಿತ್ರಾ ಅವರನ್ನು ಈ ಹಿಂದೆ ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಆದರೆ, ಇದರ ಹೊರತಾಗಿಯೂ ಟಿಎಂಸಿ ಅವರನ್ನು ಮತ್ತೆ ಕಣಕ್ಕಿಳಿಸಲು ನಿರ್ಧರಿಸಿದೆ.

ಕೋಲ್ಕತ್ತಾದ ಬ್ರಿಗೇಡ್ ಪರಾದಾ ಮೈದಾನದಲ್ಲಿ ನಡೆದ ಟಿಎಂಸಿಯ ಮೆಗಾ ರ್ಯಾಲಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 42 ಸ್ಥಾನಗಳಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದರು.

SCROLL FOR NEXT