ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ, ಶಾಲಾ ಮುಖ್ಯೋಪಾಧ್ಯಾಯನಿಗೆ 5 ವರ್ಷ ಜೈಲು ಶಿಕ್ಷೆ

ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಶಾಲೆಯೊಂದರ ಮುಖ್ಯೋಪಾಧ್ಯಾಯನಿಗೆ ಒಡಿಶಾದ ಬಾಲಸೋರ್ ಜಿಲ್ಲೆಯ ಪೋಕ್ಸೊ ನ್ಯಾಯಾಲಯ ಸೋಮವಾರ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಬಾಲಸೋರ್: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಶಾಲೆಯೊಂದರ ಮುಖ್ಯೋಪಾಧ್ಯಾಯನಿಗೆ ಒಡಿಶಾದ ಬಾಲಸೋರ್ ಜಿಲ್ಲೆಯ ಪೋಕ್ಸೊ ನ್ಯಾಯಾಲಯ ಸೋಮವಾರ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಬಾಲಸೋರ್‌ನ ಪೋಕ್ಸೋ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ರಂಜನ್ ಕುಮಾರ್ ಸುತಾರ್ ಅವರು ಮುಖ್ಯೋಪಾಧ್ಯಾಯ ಗಣೇಶ್ ಚಂದ್ರ ಸಾಹು ಅವರಿಗೆ ಈ ಶಿಕ್ಷೆ ವಿಧಿಸುವುದರ ಜೊತೆಗೆ 3,000 ರೂಪಾಯಿ ದಂಡ ವಿಧಿಸಿದ್ದಾರೆ.

ಪೋಲೀಸರ ಪ್ರಕಾರ, 10 ನೇ ತರಗತಿಯ ವಿದ್ಯಾರ್ಥಿನಿ ಶಾಲಾ ಆವರಣದಲ್ಲಿ ನೀರು ತರಲು ಹೋದಾಗ ಮುಖ್ಯೋಪಾಧ್ಯಾಯ ಲೈಂಗಿಕ ಕಿರುಕುಳ ನೀಡಿದ್ದರು. ಅಲ್ಲದೇ, ಅದನ್ನು ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು. ಆದಾಗ್ಯೂ, ಸಂತ್ರಸ್ತೆ ತನ್ನ ಕುಟುಂಬಕ್ಕೆ ತನ್ನ ಕಷ್ಟಗಳನ್ನು ತಿಳಿಸಿದಾಗ ಆಕೆಯ ತಂದೆ 2020 ರಲ್ಲಿ ಸಿಂಗ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆರೋಪಿಯನ್ನು ಬಂಧಿಸಿ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಹಲವು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!