ಸುಪ್ರೀಂಕೋರ್ಟ್‌ 
ದೇಶ

ಹೊಸ ಚುನಾವಣಾ ಆಯುಕ್ತರ ನೇಮಕ ಮಾಡದಂತೆ ಕೇಂದ್ರಕ್ಕೆ ತಡೆಯಾಜ್ಞೆ ನೀಡಿ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

2023ರ ಕಾನೂನು ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡದಂತೆ ಕೇಂದ್ರವನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

ನವದೆಹಲಿ: 2023ರ ಕಾನೂನು ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡದಂತೆ ಕೇಂದ್ರವನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

2023ರ ಕಾನೂನಿನ ಪ್ರಕಾರ ಹೊಸ ಚುನಾವಣಾ ಆಯುಕ್ತರನ್ನು ನೇಮಕ ಮಾಡದಂತೆ ಕೇಂದ್ರ ಸರಕಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಸೂಚಿಸಿದ್ದ ಮಾರ್ಗಸೂಚಿಗಳಿಗೆ ಬದ್ಧವಾಗಿರಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಜತೆಗೆ ಪ್ರಧಾನ ಮಂತ್ರಿ, ವಿರೋಧ ಪಕ್ಷದ ನಾಯಕ ಸೇರಿದಂತೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯನ್ನು ನೇಮಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸುವಂತೆ ಠಾಕೂರ್ ಅರ್ಜಿಯಲ್ಲಿ ಕೋರಿದ್ದರು.

ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಸ್ ಸಿಗ್ ಮತ್ತು ವಕೀಲ ವರುಣ್ ಠಾಕೂರ್ ಅವರು ಅರ್ಜಿಯನ್ನು ತುರ್ತು ಪಟ್ಟಿ ಮಾಡುವಂತೆ ಮನವಿ ಮಾಡಿದರು. ಈ ಮನವಿಗೆ ನ್ಯಾಯಾಲಯ ಅಸ್ತು ಎಂದಿದೆ.

ಇಮೇಲ್ ಕಳುಹಿಸಿ, ನಾವು ನೋಡುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.

ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆ ಮತ್ತು ಕಳೆದ ತಿಂಗಳು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಎರಡು ಚುನಾವಣಾ ಆಯುಕ್ತರ ಹುದ್ದೆಗಳು ಖಾಲಿ ಬಿದ್ದಿವೆ.

ಈ ವಾರದ ನಂತರ ರಾಷ್ಟ್ರೀಯ ಚುನಾವಣೆಗಳನ್ನು ಘೋಷಿಸುವ ಸಾಧ್ಯತೆಯಿರುವುದರಿಂದ ಮೂರು ಸದಸ್ಯರ ಭಾರತೀಯ ಚುನಾವಣಾ ಆಯೋಗದಲ್ಲಿ ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮಾತ್ರ ಉಳಿದಿದ್ದಾರೆ.

ಭಾರತದಲ್ಲಿ ಚುನಾವಣಾ ಕಮಿಷನರ್‌ಗಳನ್ನು ಪ್ರಧಾನ ಮಂತ್ರಿ ಅಧ್ಯಕ್ಷತೆಯ ಮೂರು ಸದಸ್ಯರ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ. ಇದರಲ್ಲಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಕೂಡ ಇದ್ದಾರೆ. ವರದಿಗಳ ಪ್ರಕಾರ ಸಮಿತಿಯು ಮಾರ್ಚ್ 15 ರಂದು ಸಭೆ ಸೇರುವ ನಿರೀಕ್ಷೆಯಿದೆ.

ಮುಖ್ಯ ಚುನಾವಣಾ ಆಯುಕ್ತ ಮತ್ತು ಇಬ್ಬರು ಚುನಾವಣಾ ಆಯುಕ್ತರನ್ನು ನೇಮಿಸಲು ಹೊಸ ಕಾರ್ಯವಿಧಾನವನ್ನು ತರಲು ಸರ್ಕಾರವು ಡಿಸೆಂಬರ್‌ನಲ್ಲಿ ಹೊಸ ಕಾನೂನನ್ನು ಪರಿಚಯಿಸಿತ್ತು.

ಹೊಸ ನೇಮಕಾತಿಗಳನ್ನು ಅಂತಿಮಗೊಳಿಸುವ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಾಧೀಶರ ಬದಲು ಕೇಂದ್ರ ಸಚಿವರನ್ನು ಸಮಿತಿಯ ಭಾಗವಾಗಿಸಲು ಹೊಸ ಕಾನೂನು ಅವಕಾಶ ಮಾಡಿ ಕೊಡಲಿದೆ.

ಈ ಕಾನೂನನ್ನು ಪ್ರತಿಪಕ್ಷಗಳು ವಿರೋಧಿಸಿದ್ದು, ಇದು ಉನ್ನತ ಚುನಾವಣಾಧಿಕಾರಿಗಳ ನೇಮಕಾತಿಯಲ್ಲಿ ಸರ್ಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುತ್ತದೆ, ಚುನಾವಣಾ ಸಂಸ್ಥೆಯ ಸ್ವಾಯತ್ತತೆಗೆ ರಾಜಿ ಮಾಡುತ್ತದೆ ಎಂದು ಆರೋಪಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT