ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ 
ದೇಶ

ಹರಿಯಾಣ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕುರುಕ್ಷೇತ್ರದ ಸಂಸದ ನಯಾಬ್ ಸಿಂಗ್ ಸೈನಿ ಅವರು ಮಂಗಳವಾರ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಚಂಡೀಗಢ: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕುರುಕ್ಷೇತ್ರದ ಸಂಸದ ನಯಾಬ್ ಸಿಂಗ್ ಸೈನಿ ಅವರು ಮಂಗಳವಾರ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಸೈನಿ ಅವರು ಇಂದು ಬೆಳಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಕೇಂದ್ರ ಸಚಿವ ಅರ್ಜುನ್ ಮುಂಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಹರಿಯಾಣ ಬಿಜೆಪಿ ಉಸ್ತುವಾರಿ ಬಿಪ್ಲಬ್ ದೇಬ್ ಅವರು ಸೈನಿ ಸಾಥ್ ನೀಡಿದರು.

ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಯಾಬ್ ಸಿಂಗ್ ಸೈನಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸೈನಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಹರಿಯಾಣ ಮುಖ್ಯಮಂತ್ರಿಯನ್ನು ಬದಲಾಯಿಸಿರುವುದು ಅಚ್ಚರಿ ಮೂಡಿಸಿದೆ. ಅಕ್ಟೋಬರ್‌ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ