ಕೇಂದ್ರ ಗೃಹ ಸಚಿವ ಅಮಿತ್ ಶಾ 
ದೇಶ

UAPA Act: ಜಮ್ಮು-ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಗೆ ಕೇಂದ್ರ ಸರ್ಕಾರ 5 ವರ್ಷ ನಿಷೇಧ!

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು 5 ವರ್ಷದ ಕಾಲ ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ.

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್ ಸಂಘಟನೆಯನ್ನು 5 ವರ್ಷದ ಕಾಲ ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ.

ಹುರಿಯತ್ ಕಾನ್ಫರೆನ್ಸ್‌ನ ಅಂಗ ಸಂಸ್ಥೆ JKNF ಅನ್ನು ತಕ್ಷಣವೇ ಜಾರಿಗೆ ಬರುವಂತೆ "ಕಾನೂನುಬಾಹಿರ ಸಂಘ" ಎಂದು ಕೇಂದ್ರ ಗೃಹ ಸಚಿವಾಲಯವು ಘೋಷಿಸಿದೆ. JKNF ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಹಾನಿಕರವಾಗಿದೆ ಎಂದು ಸರ್ಕಾರ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸುವ ಮೂಲಕ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಬೆಂಬಲವನ್ನು ನೀಡುವ ಮೂಲಕ ಭಯೋತ್ಪಾದಕ ಚಟುವಟಿಕೆಗಳು ಮತ್ತು ಭಾರತ ವಿರೋಧಿ ಪ್ರಚಾರವನ್ನು ಬೆಂಬಲಿಸುವಲ್ಲಿ JKNF ಸದಸ್ಯರು ತೊಡಗಿಸಿಕೊಂಡಿದ್ದಾರೆ ಎಂದು ಸಚಿವಾಲಯ ಹೇಳಿದೆ.

JKNF ಸದಸ್ಯರು 'ಕಾಶ್ಮೀರದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುವುದು, ಭದ್ರತಾ ಪಡೆಗಳ ಮೇಲೆ ಆಗಾಗ್ಗೆ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಹಿಂಸಾತ್ಮಕ ಪ್ರತಿಭಟನಾಕಾರರನ್ನು ಸಂಘಟಿಸುವಲ್ಲಿ ತೊಡಗಿಸಿಕೊಂಡಿದ್ದಾರೆ' ಹೀಗಾಗಿ ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

ಜನಸಂಖ್ಯಾ ಬದಲಾವಣೆ ಪರಿಶೀಲಿಸಲು ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಗೆ ಕನ್ನ! ಚಿನ್ನದ ಗಟ್ಟಿ, ಆಭರಣಗಳನ್ನು ಕದ್ದ 9 ಕಾರ್ಮಿಕರ ಬಂಧನ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

SCROLL FOR NEXT