ಘಟನಾ ಸ್ಥಳ
ಘಟನಾ ಸ್ಥಳ 
ದೇಶ

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಮದುವೆ ಮೆರವಣಿಗೆ ಮೇಲೆ ಹರಿದ ಟ್ರಕ್, 6 ಮಂದಿ ದುರ್ಮರಣ

Manjula VN

ರೈಸನ್ (ಮಧ್ಯಪ್ರದೇಶ): ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್​ವೊಂದು ಮದುವೆ ಮೆರವಣಿಗೆ ಮೇಲೆ ಹರಿದ ಪರಿಣಾಣ 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಜಿಲ್ಲೆಯ ಖಮಾರಿಯಾ ಘಾಟ್‌ನಲ್ಲಿ ಭೋಪಾಲ್-ಜಬಲ್‌ಪುರ ರಸ್ತೆ NH-45 ನಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ 11 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಹೋಶಂಗಾಬಾದ್‌ನಿಂದ ರೈಸನ್‌ನ ಪಿಪಾರಿಯಾ ಗ್ರಾಮಕ್ಕೆ ಮದುವೆ ಮೆರವಣಿಗೆ ಬಂದಿತ್ತು. ಇದೇ ವೇಳೆ ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಮದುವೆ ಮೆರವಣಿಗೆ ಮೇಲೆ ಹರಿದಿದೆ. ಇದರಿಂದಾಗಿ 6 ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಮೋಹನ್ ಯಾದವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ ಸದಸ್ಯರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 4 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಧನಸಹಾಯವನ್ನು ಮುಖ್ಯಮಂತ್ರಿಗಳು ನೀಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ ಕ್ಯಾಬಿನೆಟ್ ಸಚಿವ ವಿಶ್ವಾಸ್ ಸಾರಂಗ್ ಅವರು ಭೋಪಾಲ್ ಏಮ್ಸ್‌ನಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

SCROLL FOR NEXT