ನಟ, ರಾಜಕಾರಣಿ ಶರತ್ ಕುಮಾರ್ ( ಸಂಗ್ರಹ ಚಿತ್ರ) 
ದೇಶ

AISMK ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ ತಮಿಳು ನಟ ಶರತ್ ಕುಮಾರ್

ತಮಿಳು ನಟ ಆರ್ ಶರತ್ ಕುಮಾರ್ ಅವರು ಮಂಗಳವಾರ ತಮ್ಮ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ(ಎಐಎಸ್ಎಂಕೆ) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ.

ಚೆನ್ನೈ: ಲೋಕಸಭೆ ಚುನಾವಣೆಗೆ ಮುನ್ನ, ಕನ್ನಡದಲ್ಲೂ ನಟಿಸಿರುವ ಹಿರಿಯ ತಮಿಳು ನಟ ಆರ್ ಶರತ್ ಕುಮಾರ್ ಅವರು ಮಂಗಳವಾರ ತಮ್ಮ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ(ಎಐಎಸ್ಎಂಕೆ) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ.

ಎಐಎಸ್‌ಎಂಕೆ ಪದಾಧಿಕಾರಿಗಳು ಮತ್ತು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರ ಸಮ್ಮುಖದಲ್ಲಿ ಶರತ್ ಕುಮಾರ್ ತಮ್ಮ ಪಕ್ಷವನ್ನು ಕೇಸರಿ ಪಕ್ಷದೊಂದಿಗೆ ವಿಲೀನಗೊಳಿಸಿದರು.

ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸಿದ ನಂತರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶರತ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂದು ಹೇಳಿದರು.

2026 ರಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕೆಲಸ ಮಾಡುವಂತೆ 69 ವರ್ಷದ ಶರತ್ ಕುಮಾರ್ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

ಡಿಎಂಕೆಯಿಂಗ ರಾಜ್ಯಸಭೆಗೆ ಆಯ್ಕೆಯಾಗಿದ್ದ ಶರತ್ ಕುಮಾರ್ ಅವರು ನಂತರ ರಾಜ್ಯಸಭಾ ಸ್ಥಾನ ತ್ಯಜಿಸಿ ಎಐಎಡಿಎಂಕೆ ಸೇರಿದ್ದರು. ಅಂತಿಮವಾಗಿ 2007 ರಲ್ಲಿ AISMK ಸ್ಥಾಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ