ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ
ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ 
ದೇಶ

ನಕಲಿ ಗನ್ ಲೈಸೆನ್ಸ್ ಪ್ರಕರಣ: ಗ್ಯಾಂಗ್ ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

Lingaraj Badiger

ವಾರಣಾಸಿ: ಮೂರು ದಶಕಗಳಷ್ಟು ಹಳೆಯದಾದ ನಕಲಿ ಗನ್ ಲೈಸೆನ್ಸ್ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ವಾರಣಾಸಿಯ ವಿಶೇಷ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಸಂಸದ-ಶಾಸಕರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅವನೀಶ್ ಗೌತಮ್ ಈ ತೀರ್ಪು ನೀಡಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ ವಿನಯ್ ಸಿಂಗ್ ಅವರು ತಿಳಿಸಿದ್ದಾರೆ.

ಅನ್ಸಾರಿ ವಿರುದ್ಧ ಡಿಸೆಂಬರ್ 1990 ರಲ್ಲಿ ಗಾಜಿಪುರ ಜಿಲ್ಲೆಯ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳ ಜೊತೆಗೆ ಐಪಿಸಿ ಸೆಕ್ಷನ್ 467 (ನಕಲಿ), 468 (ವಂಚನೆ ಉದ್ದೇಶಕ್ಕಾಗಿ ಫೋರ್ಜರಿ) ಮತ್ತು 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಸರ್ಕಾರಿ ವಕೀಲರ ಪ್ರಕಾರ, ಅನ್ಸಾರಿ ಅವರು ಪ್ರಸ್ತುತ ಜೈಲಿನಲ್ಲಿರುವ ಬಂದಾ ಜೈಲಿನಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು.

ಪೊಲೀಸ್ ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶ, ಪಂಜಾಬ್, ನವದೆಹಲಿ ಮತ್ತು ಇತರ ರಾಜ್ಯಗಳಲ್ಲಿ ಅನ್ಸಾರಿ ವಿರುದ್ಧ ಸುಮಾರು 60 ಪ್ರಕರಣಗಳು ಬಾಕಿ ಇದ್ದು, ಗ್ಯಾಂಗ್ ಸ್ಟರ್, ರಾಜಕಾರಣಿಗೆ ಇದುವರೆಗೆ ಕನಿಷ್ಠ ಏಳು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ.

SCROLL FOR NEXT