ಎಡಪ್ಪಾಡಿ ಕೆ ಪಳನಿಸ್ವಾಮಿ - ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ 
ದೇಶ

ಎಐಎಡಿಎಂಕೆ ಮುಖ್ಯಸ್ಥ ಪಳನಿಸ್ವಾಮಿ, ಬಿಜೆಪಿಯ ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಸೆಷನ್ಸ್ ನ್ಯಾಯಾಲಯದಲ್ಲಿ ಗುರುವಾರ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರುದ್ಧ ಡ್ರಗ್ಸ್ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಸೆಷನ್ಸ್ ನ್ಯಾಯಾಲಯದಲ್ಲಿ ಗುರುವಾರ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಇಂದು ಪ್ರತ್ಯೇಕವಾಗಿ ಸಲ್ಲಿಸಿದ ದೂರುಗಳಲ್ಲಿ ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ ದೇವರಾಜನ್ ಅವರು ಕಲಂ 499 ಮತ್ತು 500 ಐಪಿಸಿ(ಮಾನನಷ್ಟ) ಅಡಿಯಲ್ಲಿ ಈ ಇಬ್ಬರು ನಾಯಕರನ್ನು ಶಿಕ್ಷಿಸುವಂತೆ ಕೋರಿದ್ದಾರೆ.

ರಾಜ್ಯ ವಿರೋಧ ಪಕ್ಷದ ನಾಯಕ ಪಳನಿಸ್ವಾಮಿ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಅವರ ಪ್ರತಿಷ್ಠೆಗೆ ಧಕ್ಕೆ ತರಲು ಉದ್ದೇಶಿಸಲಾಗಿದೆ ಎಂದು ದೇವರಾಜನ್ ಆರೋಪಿಸಿದ್ದಾರೆ.

‘ಮಾದಕ ಮುಕ್ತ ತಮಿಳುನಾಡು’ ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಲವು ಕ್ರಮಗಳನ್ನು ಕೈಗೊಂಡಿರುವ ಸಂದರ್ಭದಲ್ಲಿ, ಪಳನಿಸ್ವಾಮಿ ಮತ್ತು ಅಣ್ಣಾಮಲೈ ಅವರ ಮಾನಹಾನಿಕರ ಹೇಳಿಕೆಯು ಮಾದಕ ದ್ರವ್ಯ ದಂಧೆಕೋರರಿಗೆ ನೆರವು ನೀಡುತ್ತಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್