ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ANI
ದೇಶ

ಸಿಎಎ ಜಾರಿ ಪ್ರಶ್ನಿಸಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಸುಪ್ರೀಂ ಕೋರ್ಟ್ ಮೊರೆ

ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA)ವನ್ನು ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ನವದೆಹಲಿ: ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (CAA)ವನ್ನು ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿ ಪ್ರಶ್ನಿಸಿ ಎಐಎಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ ಎಂದು ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್‌ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ ಎಂದು ಒವೈಸಿ ಆರೋಪಿಸಿದ್ದಾರೆ.

ಪೌರತ್ವದ ಸ್ಥಿತಿಯ ಮಂಜೂರಾತಿಯನ್ನು ಕೋರಿ ಯಾವುದೇ ಅರ್ಜಿಗಳನ್ನು ಸರ್ಕಾರವು ಪೌರತ್ವ ಕಾಯಿದೆ, 1955 (ಪೌರತ್ವ (ತಿದ್ದುಪಡಿ) ಕಾಯಿದೆ, 2019 ರ ಮೂಲಕ ತಿದ್ದುಪಡಿ ಮಾಡಿರುವಂತೆ) ಸೆಕ್ಷನ್ 6B ಅಡಿಯಲ್ಲಿ ವಿಚಾರಣೆಯ ಬಾಕಿಯಿರುವಾಗ ಪರಿಗಣಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ. ತತ್‌ಕ್ಷಣದ ರಿಟ್ ಅರ್ಜಿಯ ಅಂತಿಮ ವಿಲೇವಾರಿಯಾಗುವವರೆಗೆ ದೋಷಪೂರಿತ ಪೌರತ್ವ ತಿದ್ದುಪಡಿ ಕಾಯ್ದೆ, 2019 ಮತ್ತು ತಿದ್ದುಪಡಿ ನಿಯಮಗಳು, 2024 ರ ಅನುಷ್ಠಾನವನ್ನು ತಡೆಹಿಡಿಯುವ ನಿರ್ದೇಶನಗಳನ್ನು ನೀಡಿ ಎಂದು ಒವೈಸಿ ಸುಪ್ರೀಂ ಕೋರ್ಟ್ ಗೆ ತಮ್ಮ ಅರ್ಜಿ ಮೂಲಕ ಮನವಿ ಮಾಡಿದ್ದಾರೆ.

ಮುಸ್ಲಿಮೇತರರಿಗೆ ಭಾರತದ ಪೌರತ್ವ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವವನ್ನು ನೀಡಲಿದೆ.

‘ಪೌರತ್ವ (ತಿದ್ದುಪಡಿ) ನಿಯಮಗಳು–2024 ಹೆಸರಿನ ಈ ನಿಯಮಗಳು, ಸಿಎಎ–2019 ಕಾಯ್ದೆಯ ಪ್ರಕಾರ ಅರ್ಹರಾದವರಿಗೆ ಭಾರತೀಯ ಪೌರತ್ವ ನೀಡಲು ಅವಕಾಶ ಕಲ್ಪಿಸಲಿವೆ’ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT