ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಿಗೆ ಏಳು ಹಂತದ ಚುನಾವಣೆ: ಆಯೋಗದ ನಡೆಗೆ TMC ಆಕ್ಷೇಪ

Lingaraj Badiger

ಕೋಲ್ಕತಾ: ಪಶ್ಚಿಮ ಬಂಗಾಳದ 42 ಸ್ಥಾನಗಳಿಗೆ ಏಳು ಹಂತದ ಲೋಕಸಭೆ ಚುನಾವಣೆ ಘೋಷಣೆಯಾಗಿರುವುದಕ್ಕೆ ಆಡಳಿತರೂಢ ಟಿಎಂಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗವು ಪಶ್ಚಿಮ ಬಂಗಾಳ ಸರ್ಕಾರದ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಶನಿವಾರ ಹೇಳಿದೆ.

ಇದು ದೇಶದ ಒಕ್ಕೂಟ ರಚನೆಯ ಕಡೆಗಣನೆ ಎಂದು ಟಿಎಂಸಿಯ ರಾಜ್ಯಸಭಾ ಸಂಸದ ಸುಖೇಂದು ಶೇಖರ್ ರೇ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡಿಲ್ಲ. ಇದು ಒಕ್ಕೂಟ ರಚನೆಯ ಕಡೆಗಣನೆ. ಇಷ್ಟು ಸುದೀರ್ಘ ಚುನಾವಣೆ ನಡೆಸಲು ಕಾರಣಗಳನ್ನು ಅರ್ಥಮಾಡಿಕೊಳ್ಳಲು ನಾವು ವಿಫಲರಾಗಿದ್ದೇವೆ. ಇದು ಸಾಕಷ್ಟು ಆಶ್ಚರ್ಯಕರವಾಗಿದೆ" ಎಂದು ರೇ ಹೇಳಿದ್ದಾರೆ.

ಪಶ್ಚಿಮ ಬಂಗಾಳದ 42 ಸ್ಥಾನಗಳಿಗೆ ಏಪ್ರಿಲ್ 19 ರಿಂದ ಎಲ್ಲಾ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳದ ಜೊತೆಗೆ, ಎಲ್ಲಾ ಏಳು ಹಂತಗಳಲ್ಲಿ ಚುನಾವಣೆ ನಡೆಯುವ ಇತರ ರಾಜ್ಯಗಳೆಂದರೆ ಬಿಹಾರ ಮತ್ತು ಉತ್ತರ ಪ್ರದೇಶ.

ಜೂನ್ 1 ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

SCROLL FOR NEXT