ರಾಜೀವ್ ಕುಮಾರ್
ರಾಜೀವ್ ಕುಮಾರ್ 
ದೇಶ

ಇವಿಎಂ ನೂರಕ್ಕೆ ನೂರು ಸುರಕ್ಷಿತ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

Lingaraj Badiger

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಶನಿವಾರ 2024 ರ ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

ಇಂದು ದೆಹಲಿಯ ವಿಜ್ಞಾನಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಇವಿಎಂ ರಿಗ್ಗಿಂಗ್ ಬಗ್ಗೆ ಪ್ರತಿಕ್ರಿಯಿಸಿದ ರಾಜೀವ್ ಕುಮಾರ್, "ಭಾರತದ ನ್ಯಾಯಾಲಯಗಳು ಇವಿಎಂಗಳ ವಿರುದ್ಧದ ವಿವಿಧ ದೂರುಗಳನ್ನು 40 ಬಾರಿ ಪರಿಶೀಲಿಸಿದ್ದು, ಪ್ರತಿ ಬಾರಿಯೂ ಎಲ್ಲಾ ಆರೋಪಗಳನ್ನು ತಿರಸ್ಕರಿಸಿವೆ" ಎಂದರು.

ಇವಿಎಂಗಳು ಸಂಪೂರ್ಣ ಸುರಕ್ಷಿತ ಎಂದು ನ್ಯಾಯಾಲಯಗಳು ಪದೇ ಪದೇ ಹೇಳುತ್ತಿವೆ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜನರು ತಜ್ಞರಂತೆ ವರ್ತಿಸುತ್ತಿದ್ದಾರೆ ಮತ್ತು ಇವಿಎಂಗಳನ್ನು ರಿಗ್ಗಿಂಗ್ ಮಾಡಬಹುದು ಎಂದು ಆರೋಪಿಸುತ್ತಿದ್ದಾರೆ. ಆದರೆ ರಿಗ್ಗಿಂಗ್ ಮಾಡಲು ಸಾಧ್ಯವಿಲ್ಲ ಮತ್ತು ಚುನಾವಣಾ ಫಲಿತಾಂಶಗಳನ್ನು ದುರ್ಬಳಕೆ ಅಸಾಧ್ಯ ಎಂದು ಸಿಇಸಿ ತಿಳಿಸಿದರು.

ಜನರು ಹೇಳುವಂತೆ ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವಿಲ್ಲ. ಇವಿಎಂ ನೂರಕ್ಕೆ ನೂರರಷ್ಟು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ.

SCROLL FOR NEXT