ಅರವಿಂದ ಕೇಜ್ರಿವಾಲ್ 
ದೇಶ

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಜಾರಿ ಮಾಡಿದ ಇ.ಡಿ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರನ್ನು ಕೇಂದ್ರ ದೆಹಲಿಯಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ.

ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜಾರಿ ಮಾಡಿರುವ ಒಂಬತ್ತನೇ ಸಮನ್ಸ್ ಇದಾಗಿದ್ದು, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಜಾರಿ ಮಾಡಿದ್ದ ಸಮನ್ಸ್‌ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದ ಕೇಜ್ರಿವಾಲ್ ಅವರು, ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು.

ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇ.ಡಿ 8 ಬಾರಿ ಸಮನ್ಸ್ ನೀಡಿದ್ದರೂ, ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಕೇಜ್ರಿವಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಇ.ಡಿ ಸಲ್ಲಿಸಿದ ಎರಡು ದೂರುಗಳ ಮೇಲೆ ದೆಹಲಿ ನ್ಯಾಯಾಲಯ ಶನಿವಾರ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಈ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರನ್ನು ಎರಡು ದಿನಗಳ ಹಿಂದಷ್ಟೇ ಸಂಸ್ಥೆ ಬಂಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT