ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ TNIE
ದೇಶ

ನಾವು ತನಿಖಾ ಸಂಸ್ಥೆ ಅಲ್ಲ: ಗುಜರಾತ್ ವಿವಿ ಹಾಸ್ಟೆಲ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ನಕಾರ

Vishwanath S

ಅಹಮದಾಬಾದ್: ಗುಜರಾತ್ ವಿಶ್ವವಿದ್ಯಾನಿಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ರಚಿಸಲು ಹೈಕೋರ್ಟ್ ನಿರಾಕರಿಸಿದ್ದು ಎಲ್ಲಾ ಘಟನೆಗಳಿಗೆ ಪಿಐಎಲ್ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಅನರುದ್ಧ ಪಿ ಮೇಯ್ ಅವರ ವಿಭಾಗೀಯ ಪೀಠವು ಘಟನೆಯನ್ನು ಸ್ವಯಂಪ್ರೇರಿತವಾಗಿ ತೆಗೆದುಕೊಳ್ಳಲು ನಿರಾಕರಿಸಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ ಎಂದರು.

ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್, "ನ್ಯಾಯವನ್ನು ಖಚಿತಪಡಿಸುವುದು ನಮ್ಮ ಪ್ರಯತ್ನವಾಗಿದೆ. ಆದರೆ ನಮ್ಮನ್ನು ತನಿಖಾ ಸಂಸ್ಥೆಯಾಗಿ ಮಾಡಬೇಡಿ. ನಾವು ಸಾಂವಿಧಾನಿಕ ನ್ಯಾಯಾಲಯಗಳು ಎಂಬುದನ್ನು ನಾವು ನೆನಪಿಸಬಯಸುತ್ತೇವೆ. ಅಂತಹ ಯಾವುದೇ ಪ್ರಕರಣ ಬಂದರೆ, ನಾವು ಖಂಡಿತವಾಗಿಯೂ ಗಮನಹರಿಸುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಘಟನೆಗಳು ಪಿಐಎಲ್ ಪ್ರಕರಣಗಳಲ್ಲ. ನಾವು ತನಿಖಾ ಅಧಿಕಾರಿಗಳಲ್ಲ. ಪೊಲೀಸರು ಎಫ್‌ಐಆರ್‌ನಲ್ಲಿ ಎಲ್ಲಾ ಸೆಕ್ಷನ್‌ಗಳನ್ನು ಸೇರಿಸಿಲ್ಲ ಎಂದು ವಕೀಲ ಕೆ.ಆರ್.ಕೋಸ್ತಿ ಹೇಳಿದ್ದಕ್ಕೆ ಕೋರ್ಟ್ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಿದೆ.

ಈ ಸಂಬಂಧ ಪೊಲೀಸರು 20-25 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದು ಒಂಬತ್ತು ತಂಡಗಳನ್ನು ರಚಿಸಿ ತನಿಖೆ ನಡೆಸಲಾಗಿದೆ ಎಂದು ತಿಳಿಸುತ್ತೇವೆ. ಪೊಲೀಸರು ಇದುವರೆಗೆ ಐವರನ್ನು ಬಂಧಿಸಿದ್ದಾರೆ. ಶ್ರೀಲಂಕಾ ಮತ್ತು ತಜಕಿಸ್ತಾನದ ಇಬ್ಬರು ವಿದ್ಯಾರ್ಥಿಗಳು ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಜ್ಬೇಕಿಸ್ತಾನ್, ಅಫ್ಘಾನಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾದ ವಿದ್ಯಾರ್ಥಿಗಳು ರಂಜಾನ್ ಹಿನ್ನಲೆ ರಾತ್ರಿ ತಮ್ಮ ಕೊಠಡಿಗಳಲ್ಲಿ ನಮಾಜ್ ಮಾಡುತ್ತಿದ್ದಾಗ ಜನರ ಗುಂಪು ಪ್ರತಿಭಟಿಸಿತ್ತು. ಇದು ಎರಡು ಗುಂಪುಗಳ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಬಳಿಕ ಜಗಳ ವಿಕೋಪಕ್ಕೆ ತಲುಪಿದ್ದು ಹೊಡೆದಾಟದಲ್ಲಿ ಐವರು ವಿದೇಶಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿದೇಶಿ ವಿದ್ಯಾರ್ಥಿಗಳು ವಾಸಿಸುವ ಗುಜರಾತ್ ವಿಶ್ವವಿದ್ಯಾಲಯದ ಎ ಬ್ಲಾಕ್ ನಲ್ಲಿ ಈ ಘಟನೆ ನಡೆದಿತ್ತು.

SCROLL FOR NEXT