ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: ಟ್ರಕ್ ಡಿಕ್ಕಿ ಹೊಡೆದು ಫುಟ್ಬಾಲ್ ತರಬೇತುದಾರ ದುರ್ಮರಣ

ಡಂಪರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 69 ವರ್ಷದ ಫುಟ್ಬಾಲ್ ತರಬೇತುದಾರರೊಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈಯಲ್ಲಿ ನಡೆದಿದೆ.

ನವಿ ಮುಂಬೈ: ಡಂಪರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 69 ವರ್ಷದ ಫುಟ್ಬಾಲ್ ತರಬೇತುದಾರರೊಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈಯಲ್ಲಿ ನಡೆದಿದೆ. ಮಾಜಿ ರಾಜ್ಯ ಮಟ್ಟದ ಫುಟ್‌ಬಾಲ್ ಆಟಗಾರರೂ ಆಗಿದ್ದ ಸ್ಟಾನ್ಲಿ ನಾಯರ್ ಮೃತ ದುರ್ದೈವಿ. ಇವರು ಖರೀದಿಗಾಗಿ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ವಾಶಿ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ವಾಶಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಯರ್ ಅವರ ಸ್ಕೂಟರ್ ಗೆ ಡಂಪರ್ ಟ್ರಕ್ ಡಿಕ್ಕಿ ಹೊಡೆದಿದೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರ ಮಗಳು ನೀಡಿದ ದೂರಿನ ಆಧಾರದ ಮೇಲೆ ಡಂಪರ್ ಚಾಲಕ ಗೋಕರ್ಣಿ ಸಹಾನಿ ವಿರುದ್ಧ ಭಾರತೀಯ ದಂಡ ಸಂಹಿತೆ 304-ಎ, (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ), 279 (ನಿರ್ಲಕ್ಷ್ಯದಿಂದ ವಾಹನ ಚಾಲನೆ ಅಥವಾ ಚಾಲನೆ) 337 (ಮನುಷ್ಯನ ಜೀವಕ್ಕೆ ಅಪಾಯವನ್ನುಂಟುಮಾಡುವ ಕೃತ್ಯದಿಂದ ನೋವುಂಟುಮಾಡುವುದು) ಮತ್ತು 338 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆಯಿಂದ ಘೋರವಾದ ಗಾಯವನ್ನು ಉಂಟುಮಾಡುವುದು) ಮತ್ತು ಮೋಟಾರು ವಾಹನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ