ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನ: ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಸೂಪರ್‌ಫಾಸ್ಟ್ ಪ್ಯಾಸೆಂಜರ್ ರೈಲು!

ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಸಬರಮತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿ ತಪ್ಪಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ. ಮಧ್ಯರಾತ್ರಿ 1.04 ರ ಸುಮಾರಿಗೆ ಮದರ್ ರೈಲು ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದ್ದು, ಸಬರಮತಿ-ಆಗ್ರಾ ಕ್ಯಾಂಟ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ಅಜ್ಮೀರ್: ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಸಬರಮತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿ ತಪ್ಪಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ. ಮಧ್ಯರಾತ್ರಿ 1.04 ರ ಸುಮಾರಿಗೆ ಮದರ್ ರೈಲು ನಿಲ್ದಾಣದ ಬಳಿ ಈ ಘಟನೆ ಸಂಭವಿಸಿದ್ದು, ಸಬರಮತಿ-ಆಗ್ರಾ ಕ್ಯಾಂಟ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ಬಳಿಕ ಕನಿಷ್ಠ ನಾಲ್ಕು ಕೋಚ್‌ಗಳು ಹಳಿತಪ್ಪಿದ್ದು, ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ರೈಲಿನ ಲೋಕೋ ಪೈಲಟ್ ತುರ್ತು ಬ್ರೇಕ್ ಹಾಕಿದರೂ ಡಿಕ್ಕಿಯನ್ನು ತಪ್ಪಿಸಲು ಸಾಧ್ಯವಾಗಲಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತಕ್ಷಣ ಅಧಿಕಾರಿಗಳು ಅಪಘಾತ ಸ್ಥಳವನ್ನು ತಲುಪಿಸಿದ್ದು, ಹಳಿ ಮರುಸ್ಥಾಪನೆ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ವಾಯುವ್ಯ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.

ಅಜ್ಮೀರ್ ನಿಲ್ದಾಣದಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಲಾಗಿದೆ ಮತ್ತು ಸಹಾಯವಾಣಿ ಸಂಖ್ಯೆ 0145-2429642 ನೀಡಲಾಗಿದೆ ಎಂದು ಅವರು ಹೇಳಿದರು.ಈ ವರ್ಷದ ಜನವರಿಯಲ್ಲಿ ಭೋಪಾಲ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ರಾಜಸ್ಥಾನದ ಕೋಟಾದಲ್ಲಿ ಹಳಿತಪ್ಪಿದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ