ಸತ್ಯೇಂದ್ರ ಜೈನ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!

ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಎಎಪಿ ನಾಯಕ ಸತ್ಯೆಂದ್ರ ಜೈನ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್‌ ತಕ್ಷಣವೇ ಶರಣಾಗುವಂತೆ ಆದೇಶಿಸಿದೆ.

ನವದೆಹಲಿ: ಭ್ರಷ್ಟಾಚಾರ ಪ್ರಕರಣ ಎದುರಿಸುತ್ತಿರುವ ಎಎಪಿ ನಾಯಕ ಸತ್ಯೆಂದ್ರ ಜೈನ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್‌ ತಕ್ಷಣವೇ ಶರಣಾಗುವಂತೆ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಹಾಗೂ ಪಂಕಜ್‌ ಮಿತ್ತಲ್‌ ಅವರಿದ್ದ ಪೀಠವು, ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಜೈನ್ ಅವರ ಜಾಮಿನು ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿತು. ಈ ವೇಳೆ ಒಂದು ವಾರದ ಅವಧಿಯಲ್ಲಿ ಶರಣಾಗಲು ಅವಕಾಶ ನೀಡುವಂತೆ ಜೈನ್ ಅವರ ವಕೀಲರ ಮೌಖಿಕ ಕೋರಿಕೆಯನ್ನು ಕೂಡ ನ್ಯಾಯಪೀಠ ತಿರಸ್ಕರಿಸಿದೆ.

ವೈದ್ಯಕೀಯ ಕಾರಣಗಳಿಗೆ ಜಾಮೀನಿನ ಮೇಲೆ ಹೊರಗಿರುವ ಸತ್ಯೇಂದ್ರ ಜೈನ್ ಸಾಮಾನ್ಯ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಪೀಠ ಎಲ್ಲ ಮೇಲ್ಮನವಿ ಅರ್ಜಿಗಳನ್ನು ವಜಾಗೊಳಿಸಿತು‌.

ಜನವರಿ 17 ರಂದು, ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು. 2023ರ ಮೇ 26 ರಂದು ವೈದ್ಯಕೀಯ ಕಾರಣಗಳಿಗಾಗಿ ಉನ್ನತ ನ್ಯಾಯಾಲಯವು ಜೈನ್‌ಗೆ ಮಧ್ಯಂತರ ಜಾಮೀನು ನೀಡಿತ್ತು, ಅಲ್ಲದೆ ಅದನ್ನು ಕಾಲಕಾಲಕ್ಕೆ ವಿಸ್ತರಿಸಲಾಗಿತ್ತು.

ನಾಲ್ಕು ಕಂಪನಿಗಳ ಮೂಲಕ ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಿದ ಅರೋಪದ ಮೇಲೆ 2022 ರ ಮೇ 30 ರಂದು ಜೈನ್‌ ಅವರನ್ನು ಇಡಿ ಬಂಧಿಸಿತ್ತು. ಸರ್ವೋಚ್ಚ ನ್ಯಾಯಾಲಯವು ತೀರ್ಪನ್ನು ಘೋಷಿಸಿದ ನಂತರ, ಸತ್ಯೇಂದ್ರ ಜೈನ್ ಅವರಿಗೆ ಶರಣಾಗಲು ಕನಿಷ್ಠ ಒಂದು ವಾರದ ಸಮಯವನ್ನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಕೇಂದ್ರೀಯ ತನಿಖಾ ದಳ (CBI) ಆರಂಭದಲ್ಲಿ ಜೈನ್ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ, 1988 ರ 13 (ಇ) (ಅಪಮಾನದ ಆಸ್ತಿ) ಸೆಕ್ಷನ್ 13(2) (ಸಾರ್ವಜನಿಕ ಸೇವಕರಿಂದ ಕ್ರಿಮಿನಲ್ ದುಷ್ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು. ಜೈನ್ ಅವರು 2015 ಮತ್ತು 2017 ರ ನಡುವೆ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಚರ ಆಸ್ತಿಗಳನ್ನು ಸಂಪಾದಿಸಿದ್ದಾರೆ ಈ ಬಗ್ಗೆ ಅವರು ತೃಪ್ತಿಕರವಾಗಿ ಲೆಕ್ಕ ನೀಡಿಲ್ಲ ಎಂದು ಆರೋಪಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT