ತಮಿಳ್​ಇಸಯ್ ಸೌಂದರ್ ರಾಜನ್ ರಾಜೀನಾಮೆ 
ದೇಶ

Tamilisai Soundararajan: ತೆಲಂಗಾಣ, ಪುದುಚೇರಿ ರಾಜ್ಯಪಾಲೆ ತಮಿಳ್​ಇಸಯ್ ಸೌಂದರ್ ರಾಜನ್ ರಾಜೀನಾಮೆ; ಲೋಕಸಭೆಗೆ ಸ್ಪರ್ಧೆ?

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲರಾದ ತಮಿಳ್​ಇಸಯ್ ಸೌಂದರರಾಜನ್(Tamilisai Soudararajan) ರಾಜೀನಾಮೆ ನೀಡಿದ್ದಾರೆ.

ಹೈದರಾಬಾದ್: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲರಾದ ತಮಿಳ್​ಇಸಯ್ ಸೌಂದರ್ ರಾಜನ್(Tamilisai Soudararajan) ರಾಜೀನಾಮೆ ನೀಡಿದ್ದಾರೆ.

ತಮಿಳ್​ಇಸಯ್ ಸೌಂದರರಾಜನ್ ಅವರು ದೆಹಲಿಯಲ್ಲಿ ರಾಜೀನಾಮೆ ಸಲ್ಲಿಸಿದರು ಮತ್ತು ಸೋಮವಾರ ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಸ್ವತಃ ಪುದುಚೇರಿ ರಾಜಭವನ ಕೂಡ ತಮಿಳ್​ಇಸಯ್ ಸೌಂದರ್ ರಾಜನ್ ಅವರ ರಾಜಿನಾಮೆ ವಿಚಾರವನ್ನು ಸ್ಪಷ್ಟಪಡಿಸಿದೆ.

ಸಕ್ರಿಯ ರಾಜಕಾರಣಕ್ಕೆ ತಮಿಳ್​ಇಸಯ್ ಸೌಂದರರಾಜನ್

ಇನ್ನು ಕೆಲವು ದಿನಗಳ ಹಿಂದೆ ತಮಿಳ್​ಇಸಯ್ ಸೌಂದರ್ ರಾಜನ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕತ್ವದಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ. ಲೋಕಸಭೆ ಚುನಾವಣೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌಂದರ್ ರಾಜನ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅವರು ಉತ್ತರ ತಮಿಳುನಾಡು, ಪುದುಚೇರಿ ಅಥವಾ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ.

ಅಂದಹಾಗೆ ಪುದುಚೇರಿಯಲ್ಲಿ ಎನ್​ಆರ್​ ಕಾಂಗ್ರೆಸ್​-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ