ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಾವೋವಾದಿಗಳು ಹತ

ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ.

ದಾಂತೇವಾಡ: ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿರಾಂಡುಲ್ ಪೊಲೀಸ್ ಠಾಣಾ ವ್ಯಾಪ್ತಿಯ ಪುರಂಗೆಲ್ ಮತ್ತು ಗಾಂಪುರ್ ಗ್ರಾಮಗಳ ಸಮೀಪವಿರುವ ಕಾಡಿನಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರೆದಿದೆ ಎಂದು ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ಅವರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಮಾವೋವಾದಿಗಳ ಉಪಸ್ಥಿತಿಯ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾ ರಿಸರ್ವ್ ಗಾರ್ಡ್, ಬಸ್ತಾರ್ ಫೈಟರ್ಸ್, ರಾಜ್ಯ ಪೊಲೀಸರ ಎರಡೂ ಘಟಕಗಳು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆಯ 111, 230 ಮತ್ತು 231 ನೇ ಬೆಟಾಲಿಯನ್‌ನ ಸಿಬ್ಬಂದಿ ಕಾರ್ಯಾಚರಣೆಯ ಭಾಗವಾಗಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಂಡಿನ ಚಕಮಕಿ ನಿಂತ ನಂತರ, ಘಟನಾ ಸ್ಥಳದಿಂದ ಪುರುಷ ಮತ್ತು ಮಹಿಳಾ ಮಾವೋವಾದಿಯ ಶವಗಳನ್ನು ವಶಕ್ಕೆ ಪಡೆಯಲಾಗಿದೆ ಮತ್ತು ಎರಡು ಶಸ್ತ್ರಾಸ್ತ್ರಗಳು, ಕೆಲವು ಸ್ಫೋಟಕಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಂಚರಾಜ್ಯ ಚುನಾವಣೆ ಫಲಿತಾಂಶ: ಎಂಕೆ ಸ್ಟಾಲಿನ್, ಮಮತಾ, ಗೌರವ್ ಗೋಗೋಯ್ ಸೇರಿದಂತೆ ಹೀನಾಯ ಸೋಲು ಕಂಡ ಘಟಾನುಘಟಿಗಳು!

IPL 2026: ಲಕ್ನೋ ವಿರುದ್ಧ 6 ವಿಕೆಟ್ ಗಳಿಂದ ಗೆದ್ದ ಮುಂಬೈ ಇಂಡಿಯನ್ಸ್!

TMCಗೆ ತೀವ್ರ ಮುಖಭಂಗ: 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸಿಎಂ ಮಮತಾ ಬ್ಯಾನರ್ಜಿಗೆ ಹೀನಾಯ ಸೋಲು!

ಬಂಗಾಳದ ಗೆಲುವಿನೊಂದಿಗೆ ಇಂದು ಗಂಗೋತ್ರಿಯಿಂದ ಗಂಗಾಸಾಗರದವರೆಗೆ ಕಮಲ ಅರಳಿದೆ: ಪ್ರಧಾನಿ ಮೋದಿ

ಕೇರಳ ಚುನಾವಣೆಯಲ್ಲಿ ಹೀನಾಯ ಸೋಲು: ಸಿಎಂ ಸ್ಥಾನಕ್ಕೆ ಪಿಣರಾಯಿ ವಿಜಯನ್ ರಾಜೀನಾಮೆ!

SCROLL FOR NEXT