ಯೋಗ ಗುರು ರಾಮ್ ದೇವ್ 
ದೇಶ

ಪತಂಜಲಿ ಜಾಹೀರಾತು: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಸಮನ್ಸ್

ಪತಂಜಲಿ ಕಂಪನಿಯ ಉತ್ಪನ್ನಗಳ ಜಾಹೀರಾತು ಮತ್ತು ಔಷಧೀಯ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮನ್ಸ್ ನೀಡಿದೆ.

ನವದೆಹಲಿ: ಪತಂಜಲಿ ಕಂಪನಿಯ ಉತ್ಪನ್ನಗಳ ಜಾಹೀರಾತು ಮತ್ತು ಔಷಧೀಯ ಪರಿಣಾಮಕಾರಿತ್ವಕ್ಕೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರ ಖುದ್ದು ಹಾಜರಾತಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮನ್ಸ್ ನೀಡಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠ, ಈ ಹಿಂದೆ ನೀಡಲಾದ ನೋಟಿಸ್ ಗೆ ಪ್ರತಿಕ್ರಿಯೆ ನೀಡದ ಕಂಪನಿ ಮತ್ತು ಬಾಲಕೃಷ್ಣ ಅವರ ನಡೆಯನ್ನು ತೀವ್ರವಾಗಿ ಖಂಡಿಸಿತು.

ನ್ಯಾಯಾಲಯಕ್ಕೆ ನೀಡಿದ ಭರವಸೆಯನ್ನು ಮೇಲ್ನೋಟಕ್ಕೆ ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಮೊಕದ್ದಮೆ ಪ್ರಾರಂಭಿಸಬಾರದು ಎಂಬುದಕ್ಕೆ ಪ್ರತಿಕ್ರಿಯೆ ನೀಡುವಂತೆ ಅವರಿಗೆ ಸೂಚನೆ ನೀಡಿತ್ತು. ರಾಮ್‌ದೇವ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಏಕೆ ಪ್ರಾರಂಭಿಸಬಾರದು ಎಂಬ ಕಾರಣವನ್ನು ತಿಳಿಸಲು ನ್ಯಾಯಪೀಠ ನೋಟಿಸ್ ಜಾರಿಗೊಳಿಸಿತು.

ರಾಮ್‌ದೇವ್ ಅವರು ಲಸಿಕೆ ಅಭಿಯಾನ ಮತ್ತು ಆಧುನಿಕ ಔಷಧಗಳ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT