ಕಾಂಗ್ರೆಸ್ vs ಬಿಜೆಪಿ
ಕಾಂಗ್ರೆಸ್ vs ಬಿಜೆಪಿ 
ದೇಶ

Loksabha Election 2024: ಮೊದಲ ಹಂತದ ಚುನಾವಣೆ, ನಾಮಪತ್ರ ಸಲ್ಲಿಕೆ ಆರಂಭ

Srinivasamurthy VN

ನವದೆಹಲಿ: ದೇಶದಲ್ಲಿ ಹೊಸ ಸರ್ಕಾರ ರಚನೆಗೆ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು ತಮಿಳುನಾಡಿನ 39 ಕ್ಷೇತ್ರಗಳೂ ಸೇರಿದಂತೆ 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

3ನೇ ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ಕನಸು ಕಾಣುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಭರ್ಜರಿ ಪ್ರಚಾರಕ್ಕೆ ಚಾಲನೆ ನೀಡಿ, ಮತ ಬೇಟೆ ಆರಂಭಿಸಿದ್ದಾರೆ. ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟ ಕೂಡ ಈ ಬಾರಿ ಮೋದಿ ಪ್ರಧಾನಿಯಾಗುವುದನ್ನು ತಪ್ಪಿಸಲು ತೀವ್ರ ಕಸರತ್ತು ನಡೆಸಿದೆ. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಮೊದಲ ಹಂತ ಸೇರಿದಂತೆ ಜೂನ್ 1 ರ ತನಕ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಏಪ್ರಿಲ್ 19 ರ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 102 ಸ್ಥಾನಗಳಿಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಕಾರ್ಯಕ್ಕೆ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಿದೆ. ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ ಹೊರಡಿಸಿದ ಅಧಿಸೂಚನೆಯ ಪ್ರಕಾರ, ನಾಮಪತ್ರ ಸಲ್ಲಿಸಲು ಮಾರ್ಚ್ 27 ಕೊನೆಯ ದಿನಾಂಕವಾಗಿದೆ. ಮುಂಬರುವ ಹಬ್ಬಗಳ ಕಾರಣ, ಲೋಕಸಭೆ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಮಾರ್ಚ್ 28 ಅಂತಿಮ ದಿನವಾಗಿದೆ.

ಬಿಹಾರದಲ್ಲಿ ಮೊದಲ ಹಂತದ ಮತದಾನಕ್ಕೆ ಸಜ್ಜಾಗಿದ್ದು, ಬಿಹಾರ ತನ್ನ 40 ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳಿಗೆ ಆರಂಭಿಕ ಹಂತದಲ್ಲಿ ಮತದಾನ ನಡೆಯಲಿದೆ. ಬಿಹಾರದಲ್ಲಿ ಪ್ರಕ್ರಿಯೆ ಮಾರ್ಚ್ 30 ಕ್ಕೆ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಲು ಏಪ್ರಿಲ್ 2ರ ಅಂತಿಮ ಗಡುವು ನೀಡಲಾಗಿದೆ.

ಮೊದಲ ಹಂತದಲ್ಲಿ ಯಾವಾವ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ? ಇಲ್ಲಿದೆ ಮಾಹಿತಿ

ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಂತೆಯೇ ರಾಜಸ್ತಾನದ 12 ಲೋಕಸಭಾ ಕ್ಷೇತ್ರ, ಉತ್ತರ ಪ್ರದೇಶದ 8 ಕ್ಷೇತ್ರ, ಮಧ್ಯ ಪ್ರದೇಶದ 6 ಕ್ಷೇತ್ರ, ಉತ್ತರಾಖಂಡ ಮತ್ತು ಮಹಾರಾಷ್ಟ್ರ, ಅಸ್ಸಾಂ ತಲಾ 5 ಕ್ಷೇತ್ರ, ಬಿಹಾರ 4 ಕ್ಷೇತ್ರ, ಪಶ್ಚಿಮ ಬಂಗಾಳ 3 ಕ್ಷೇತ್ರ, ಮಣಿಪುರ, ಅರುಣಾಚಲ ಪ್ರದೇಶ, ಮೇಘಾಲಯ ತಲಾ 2 ಕ್ಷೇತ್ರ, ಪುದುಚೆರಿ, ಅರುಣಾಚಲ ಪ್ರದೇಶ, ಛತ್ತೀಸ್ ಘಡ, ಜಮ್ಮು ಕಾಶ್ಮೀರ, ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್ , ಸಿಕ್ಕಿಂ ಮತ್ತು ತ್ರಿಪುರ ಲೋಕಸಭೆಯ ತಲಾ 1 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

18ನೇ ಲೋಕಸಭೆಯ ಸಾರ್ವತ್ರಿಕ ಚುನಾವಣೆಗಳು ಏಪ್ರಿಲ್ 19 ರಿಂದ 7 ಹಂತಗಳಲ್ಲಿ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಹೊರ ಬೀಳಲಿದೆ. ಚುನಾವಣಾ ಆಯೋಗ ಅಧಿಸೂಚನೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಕಣ ರಂಗೇರಲಿದೆ.

SCROLL FOR NEXT